ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹಿಂದಿ ವಿಭಾಗದಿಂದ “ಹಿಂದಿ ದಿವಸ್ – ಜ್ಯೋತ್ಸ್ನಾ” ಕಾರ್ಯಕ್ರಮ ಜರುಗಿತು.
ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರನ್ನು ಹಿಂದಿ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಉಪಸ್ಥಿತರಿದ್ದರು

“ಹಿಂದಿ ದಿವಸ್ – ಜ್ಯೋತ್ಸ್ನಾ” ದ ಅಂಗವಾಗಿ ಕಬೀರ್ ಭಜನ್, ಹನುಮಾನ್ ಚಾಲೀಸ್ ಕಂಠಪಾಠ, ಹಿಂದಿ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ.ಪ್ರಫುಲ್ಲಾ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಹಿಂದಿ ವಿಭಾಗದ ಉಪನ್ಯಾಸಕಿಯರಾದ ಅಶ್ವಿನಿ ಪಿ. ವಂದಿಸಿದರು. ಶ್ರೀನಿಧಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ತೃತೀಯ ಬಿ.ಎಸ್.ಸಿ ವಿದ್ಯಾರ್ಥಿ ಶ್ರೀಕೃಷ್ಣ ಕೆದಿಲಾಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಹಿಂದಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.