ಭಗವದ್ಗೀತಾ ಕಂಠಪಾಠ & ಕನ್ನಡ ಭಾಷಣ ಸ್ಪರ್ಧೆ: ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಇಲ್ಲಿನ ಸೀತಾರಾಮ ಚಂದ್ರ ದೇವಸ್ಥಾನ ಕುಂದಾಪುರದಲ್ಲಿ ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪುಣ್ಯಶ್ರೀ ಜೈನ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.

Call us

Call us

ಬಾಲಗಂಗಾಧರನಾಥ ತಿಲಕರು ಹಾಗೂ ಭಗವದ್ಗೀತೆ ಈ ವಿಚಾರವಾಗಿ ನಡೆದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯ ತ್ರತೀಯ ಸ್ಥಾನ ಪಡೆದಿರುತ್ತಾಳೆ.

Call us

Call us

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮತ್ತು ಬೋಧಕ,ಬೋಧಕೇತರ ವ್ರಂದದವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

15 − five =