ಭಾರತೀಯ ಮೂಲದ ಮಹಿಳೆ ನ್ಯೂಯಾರ್ಕನಲ್ಲಿ ನ್ಯಾಯಾಧೀಶೆ

Call us

Call us

ಭಾರತ ಮೂಲದ ರಾಜರಾಜೇಶ್ವರಿ ನ್ಯೂಯಾರ್ಕ್‌ ಕ್ರಿಮಿನಲ್‌ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಭಾರತ ಮೂಲದವರೊಬ್ಬರು ನ್ಯೂಯಾರ್ಕ್‌ನ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

Call us

Call us

Visit Now

43 ವರ್ಷದ ರಾಜರಾಜೇಶ್ವರಿ ಅವರು ಚೆನ್ನೈನಲ್ಲಿ ಜನಿಸಿದವರು. 16 ವರ್ಷದವರಿದ್ದಾಗ ಅಮೆರಿಕ ಸೇರಿದ ರಾಜರಾಜೇಶ್ವರಿ, ರಿಚ್ಮಂಡ್‌ ಕೌಂಟಿಯ ಜಿಲ್ಲಾ ಅಟಾರ್ನಿ ಕಚೇರಿಯಲ್ಲಿ ಸಹಾಯಕ ಜಿಲ್ಲಾ ಅಟಾರ್ನಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Click here

Call us

Call us

‘ಈ ನೇಮಕದಿಂದ ಹೆಚ್ಚು ಸಂತೋಷವಾಗಿದೆ. ಅನಿವಾಸಿಯೊಬ್ಬರಿಗೆ ಇಂಥ ಗಳಿಗೆಗಳು ಹೆಚ್ಚು ಸ್ಮರಣೀಯ. ಈ ನೇಮಕ ನನ್ನಂಥ ಅನೇಕರಿಗೆ ಪ್ರೇರಣೆ’ ಎಂದು ರಾಜರಾಜೇಶ್ವರಿ ಹೇಳಿದ್ದಾರೆ. ಭರತನಾಟ್ಯ ಮತ್ತು ಕೂಚುಪುಡಿ ನೃತ್ಯಪಟುವೂ ಆಗಿರುವ ರಾಜರಾಜೇಶ್ವರಿ ಅವರು ಅಮೆರಿಕದಲ್ಲಿ ನಡೆಯುವ ಅನಿವಾಸಿ ಭಾರತೀಯರ ಸಮಾರಂಭಗಳಲ್ಲಿ ನೃತ್ಯ ಪ್ರದರ್ಶನವನ್ನೂ ನೀಡಿದ್ದಾರೆ.

Leave a Reply

Your email address will not be published. Required fields are marked *

1 × two =