ಭಾರತೀಯ ಸಂಸ್ಕ್ರತಿ ಮತ್ತು ನೈತಿಕ ಶಿಕ್ಷಣದಿಂದ ಮಕ್ಕಳಲ್ಲಿ ದೇಶಪ್ರೇಮ ಮೂಡುವುದು: ಶ್ರೀ ಸತ್ಯಸ್ವರೂಪಾನಂದಜೀ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು:  ಶಿರೂರು ರಾಗತರಂಗ ಟ್ರಸ್ಟ್ ನೂತನವಾಗಿ ಆರಂಭಿಸಿದ ರಾಗತರಂಗ ಸೇವಾಸಂಗಮ ಶಿಶುಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದಜೀ ಮಕ್ಕಳಿಗೆ ಬಾಲ್ಯದಲ್ಲಿ ಭಾರತೀಯ ಸಂಸ್ಕೃತಿ ಆಧಾರಿತ ಹಾಗೂ ನೈತಿಕ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಪೋಷಕರು ಸಹಕರಿಸಬೇಕು. ಗುರುಹಿರಿಯರನ್ನು ಗೌರವಿಸುವ ಪ್ರವೃತಿಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು.

Call us

Call us

Click Here

Visit Now

ಬಾಲ್ಯದಲ್ಲಿ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿ ಮಕ್ಕಳು ದಾರಿ ತಪ್ಪದಂತೆ ಎಚ್ಚರವಹಿಸಿ ಜತೆಗೆ ಮಕ್ಕಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಂತಹ ಮಹತ್ಕಾರ್ಯವನ್ನು ಶಿಶು ಮಂದಿರಗಳು ನಿಸ್ವಾರ್ಥತೆಯಿಂದ ಮಾಡುತ್ತಿದೆ. ಸದಾ ಕ್ರಿಯಾಶೀಲವಾಗಿ ತನ್ನ ಚಟುವಟಿಕೆಗಳನ್ನು ನಡೆಸುತ್ತಾ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಶಿಶು ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಾತಾಜಿಯವರ ಸೇವೆ ಮತ್ತು ತ್ಯಾಗ ಹಾಗೂ ಶಿಶುಮಂದಿರದ ಕಾರ್ಯ ಅವಿಸ್ಮರಣೀಯ ಎಂದು ಸ್ವಾಮೀಜಿ ಶ್ಲಾಘಿಸಿದರು.

Click here

Click Here

Call us

Call us

ಕುಂದಾಪುರ ಸೇವಾಸಂಗಮ ಟ್ರಸ್ಟ್‌ನ ವಿಶ್ವಸ್ಥ ಸುಬ್ರಹ್ಮಣ್ಯ ಹೊಳ್ಳ, ಕಾರ್ಯದರ್ಶಿ ಚಂದ್ರಿಕಾ ಧನ್ಯ, ಗೋಪಾಲಕೃಷ್ಣ ಶಿರೂರು, ಕಟ್ಟಡ ಮಾಲೀಕ ರಮೇಶ ಮೇಸ್ತ ಉಪಸ್ಥಿತರಿದ್ದರು. ರಾಗತರಂಗ ಟ್ರಸ್ಟ್‌ನ ಅಧ್ಯಕ್ಷ ಉಮೇಶ ಮೇಸ್ತ ಪ್ರಾಸ್ತಾವಿಕ ಮಾತನಾಡಿದರು. ಸೇವಾಸಂಗಮದ ಸಂಚಾಲಕ ದೇವರಾಜ ಎಂ. ಮೇಸ್ತ ಸ್ವಾಗತಿಸಿದರು. ಶ್ರೀಕಾಂತ್ ಕಾಮತ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ನಮ್ಮ ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಗಟ್ಟಿಯಾಗಿದೆ. ಆದರೆ ಅದನ್ನು ಪ್ರಚುರಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ ಮುಂತಾದವುಗಳು ಅಭಿವೃದ್ಧಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ದೃಢ ವಿಚಾರಗಳಿಂದ ಸದೃಢ ರಾಷ್ಟ್ರ ನಿರ್ಮಿಸಲು ಎಲ್ಲರನ್ನೂ ಒಟ್ಟುಗೂಡಿಸಲು ಸಾಧ್ಯವಿದೆ.- ಶ್ರೀ ಸತ್ಯಸ್ವರೂಪಾನಂದಜೀ, ಶ್ರೀ ರಾಮಕೃಷ್ಣ ಕುಟೀರ ಯಳಜಿತ್

 

Leave a Reply

Your email address will not be published. Required fields are marked *

4 × three =