ಭಾರತ ಮಾತಾ ಪೂಜನ ಕಾರ್ಯಕ್ರಮ

Call us

ಗಂಗೊಳ್ಳಿ: ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸಿದರೆ ಮಕ್ಕಳಲ್ಲಿ ದೇಶಭಕ್ತಿ ಮೂಡಲು ಸಹಾಯಕವಾಗುತ್ತದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಪ್ರಾಣತ್ಯಾಗ ಮಾಡಿದ ಅನೇಕ ದೇಶಭಕ್ತರನ್ನು, ಯೋಧರನ್ನು ನಾವು ಸದಾ ಸ್ಮರಿಸಿಕೊಳ್ಳಬೇಕು. ದೇಶದೆಲ್ಲೆಡೆ ಹೆಚ್ಚುತ್ತಿರುವ ಭಯೋತ್ಪಾದನೆ ಮೊದಲಾದ ಅನೇಕ ದೇಶದ್ರೋಹಿ ಚಟುವಟಿಕೆಗಳಲ್ಲಿ ಯುವಕರ ಪಾತ್ರ ಹೆಚ್ಚಾಗಿ ಕಂಡು ಬರುತ್ತಿದ್ದು, ಇಂತಹ ಚಟುವಟಿಕೆಗಳನ್ನು ಹತ್ತಿಕ್ಕಲು ನಾವು ನಮ್ಮ ದೇಶದ ಮೇಲೆ ಪ್ರೀತಿ ಅಭಿಮಾನವನ್ನು ಬೆಳೆಸಿಕೊಂಡು ನಾವೆಲ್ಲರೂ ಭಾರತೀಯರು ಎಂಬ ಭಾವನೆ ರೂಢಿಸಿಕೊಳ್ಳಬೇಕು ಎಂದು ಸಮಾಜಸೇವಕ ಜಿ.ಗಣಪತಿ ಶಿಪಾ ಹೇಳಿದರು.

ಅವರು ಇತ್ತೀಚಿಗೆ ಗಂಗೊಳ್ಳಿಯ ವೀರ ಸಾವರ್ಕರ್ ದೇಶಪ್ರೇಮಿಗಳ ಬಳಗದ ಆಶ್ರಯದಲ್ಲಿ ಗಂಗೊಳ್ಳಿಯ ದೊಡ್ಡಹಿತ್ಲು ವಠಾರದಲ್ಲಿ ಜರಗಿದ ಭಾರತ ಮಾತಾ ಪೂಜನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Call us

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ ದಿಕ್ಸೂಚಿ ಭಾಷಣ ಮಾಡಿದರು. ಸ್ಫೂರ್ತಿ ಮಹಿಳಾ ಸಂಘದ ಸದಸ್ಯರು ಭಾರತ ಮಾತೆಗೆ ವಂದಿಸುವ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವೀರ ಸಾವರ್ಕರ್ ದೇಶಪ್ರೇಮಿಗಳ ಬಳಗದ ರಂಜಿತ್ ಖಾರ್ವಿ ಉಪಸ್ಥಿತರಿದ್ದರು.

ವೀರ ಸಾವರ್ಕರ್ ದೇಶಪ್ರೇಮಿಗಳ ಬಳಗದ ಯೋಗೀಶ್ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ ಖಾರ್ವಿ ವಂದಿಸಿದರು.

Leave a Reply

Your email address will not be published. Required fields are marked *

five × five =