ಭ್ರಷ್ಟಾಚಾರ ನಿರ್ಮೂಲನೆಯಿಂದ ದೇಶದ ಅಭಿವೃದ್ಧಿ: ಲೋಕಾಯುಕ್ತ ಎಸ್. ಪಿ. ಕುಮಾರ ಸ್ವಾಮಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ದೇಶದ ಆರ್ಥಿಕ, ಸಾಮಾಜಿಕ ಸೇರಿದಂತೆ ಎಲ್ಲಾ ಅಭಿವೃದ್ದಿಗೆ ಭ್ರಷ್ಠಾಚಾರವು ಪ್ರಮುಖ ಅಡಚಣೆಯಾಗಿದ್ದು, ಇದರ ನಿರ್ಮೂಲನೆಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಲಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಉಡುಪಿ ಮತ್ತು ದ.ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಹೇಳಿದರು.

Call us

Call us

ಅವರು ಉಡುಪಿಯ ಅಬಕಾರಿ ಭವನದಲ್ಲಿ, ಜಾಗೃತ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

Call us

Call us

ಸರ್ಕಾರಿ ಕಚೇರಿಗಳಲ್ಲಿ, ಸಮಾಜದಲ್ಲಿ ಭ್ರಷ್ಠಾಚಾರ ಆಳವಾಗಿ ಬೇರೂರಿದ್ದು, ಕೆಟ್ಟ ಪಿಡುಗು ಆಗಿದೆ. ಇದನ್ನು ನಿರ್ಮೂಲನೆ ಮಾಡಲು ಎಲ್ಲಾ ನಾಗರೀಕರು,ಸರ್ಕಾರಿ ನೌಕರರು ಒಟ್ಟಾಗಿ ಕೆಲಸ ಮಾಡಬೇಕಿದೆ, ನೌಕರರು ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ , ಸಕಾಲದಲ್ಲಿ , ಪ್ರಾಮಾಣಿಕವಾಗಿ ಮಾಡಿಕೊಡಬೇಕು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಮುಂದಿನ ಪೀಳಿಗೆಗೆ ಸ್ಪೂರ್ತಿ ಮತ್ತು ಆದರ್ಶಪ್ರಾಯವಾಗಬೇಕು. ಭ್ರಷ್ಠಾಚಾರ ಪ್ರಕರಣಗಳಲ್ಲಿ ಸಿಲುಕಿದರೆ ಮಾನಸಿಕ ಮತ್ತು ದೈಹಿಕ ಖಿನ್ನತೆ ಅನುಭವಿಸಬೇಕಾಗುತ್ತದೆ. ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಲೋಕಾಯುಕ್ತ ಸಂಸ್ಥೆಯೊಂದಿಗೆ ಸಮಾಜದ ಎಲ್ಲರೂ ಕೈ ಜೋಡಿಸ ಬೇಕು ಎಂದರು.

ಉಡುಪಿ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕ ಜಗದೀಶ್ ಮಾತನಾಡಿ, ಎಲ್ಲಾ ಕಚೇರಿಗಳಲ್ಲಿ ಭ್ರಷ್ಠಾಚಾರ ಜಾಗೃತಿಯು ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ , ವರ್ಷ ಪೂರ್ತಿ ಜಾಗೃತಿ ಮೂಡಬೇಕು, ನೌಕರರು ಸಾರ್ವಜನಿಕರಿಂದ ದೂರುಗಳು ಬಾರದಂತೆ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.

ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತೆ ರೂಪಾ, ಉಡುಪಿ ಲೋಕಾಯುಕ್ತದ ಪೊಲೀಸ್ ನಿರೀಕ್ಷಕ ಜಯರಾಮ ಗೌಡ ಉಪಸ್ಥಿತರಿದ್ದರು. ಅಬಕಾರಿ ನಿರೀಕ್ಷಕಿ ಶುಭದಾ ಸಿ ನಾಯಕ್ ಸ್ವಾಗತಿಸಿದರು, ಉಪ ನಿರೀಕ್ಷಕ ಶಿವಶಂಕರ್ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಅಬಕಾರಿ ,ಅರಣ್ಯ, ಉಡುಪಿ ತಾ.ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

19 + nineteen =