ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ

Call us

ಕುಂದಾಪುರ: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಐದು ವರ್ಷಗಳಿಂದ ಅತ್ಯಾಚಾರಗೈದು ಕೊನೆಗೆ ಕೈ ಕೊಟ್ಟ ಉಪ್ಪುಂದದ ನಿವಾಸಿ ನಾಗರಾಜ ಖಾರ್ವಿ ವಿರುದ್ಧ ಬಿಜೂರು ಗ್ರಾಮದ ಯುವತಿಯೋರ್ವಳು ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Call us

ಯುವತಿಯ ಮನೆಯವರಲ್ಲಿ ಆಕೆಯನ್ನು ತಾನು ಮದುವೆಯಾಗುವುದಾಗಿ ತಿಳಿಸಿ ಆಗಾಗ ತನ್ನ ಮನೆಗೆ ಬರುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋಡಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆಸಿರುವ ಈ ವಿಷಯವನ್ನು ಯಾರಿಗೂ ಹೇಳಬೇಡ ಎಂದು ಹೇಳಿದ್ದಲ್ಲದೇ ಒಂದು ವೇಳೆ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

19 + sixteen =