ಮಧ್ಯದಂಗಡಿ ಮಾಲಕರಿಂದ ಹಳ್ಳಿಗಳಲ್ಲಿ ಅಕ್ರಮ ಮಧ್ಯ ಮಾರಾಟ: ಅಪ್ಪಣ್ಣ ಹೆಗ್ಡೆ ಕಳವಳ

Call us

Call us

ಬೈಂದೂರು: ಶ್ರೀಕ್ಷೇತ್ರದ ವತಿಯಿಂದ ಮದ್ಯಮುಕ್ತ ಗ್ರಾಮವನ್ನಾಗಿಸಲು ಪ್ರತೀ ಗ್ರಾಮ ಮಟ್ಟದಲ್ಲಿ ಮದ್ಯವರ್ಜನ ಶಿಬಿರಗಳ ಮೂಲಕ ಕುಡಿತಕ್ಕೆ ದಾಸರಾಗಿರುವವರ ಮನಪರಿವರ್ತಿಸಿ ಅವರು ನವಜೀವನ ನಡೆಸುವ ಮಾರ್ಗವನ್ನು ರೂಪಿಸುತ್ತಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ವೈನ್ ಶಾಪ್ ಮಾಲಿಕರು ಹಳ್ಳಿ ಹಳ್ಳಿಗಳ ಗೂಡಂಗಡಿಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿ ಅಲ್ಲಿ ಮಾರಾಟ ಮಾಡಿಸುತ್ತಿದ್ದಾರೆ. ಇದರಿಂದ ಆ ಪ್ರದೇಶಗಳ ಪ್ರತೀ ಮನೆಗಳಲ್ಲಿ ಕುಡಿತದ ಚಟವು ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಕಳವಳ ವ್ಯಕ್ತಪಡಿಸಿದರು.

Call us

Call us

Call us

ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಉಪ್ಪುಂದ, ಖಂಬದಕೋಣೆ ವಲಯದ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಜನಜಾಗೃತಿ ವೇದಿಕೆ ಕುಂದಾಪುರ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಹಾಗೂ ಇತರ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ೮೯೩ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.

Call us

Call us

ಹಳ್ಳಿಪ್ರದೇಶಗಳ ಗೂಡಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿಯಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಕ್ರಮ ಜರುಗಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ವೈನ್ ಶಾಪ್ ಮಾಲಿಕರಿಂದ ಮಾಮೂಲು ಪಡೆದು ಮದ್ಯದ ಲಾಭಿಗೆ ಮಣಿದ ಇಲಾಖೆ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಧಗ್ರಾಯೋ ಸಂಘದ ಸದಸ್ಯರು ಹಾಗೂ ಸ್ಥಳಿಯರು ಒಟ್ಟಾಗಿ ಈ ಸಾಮಾಜಿಕ ಪಿಡುಗನ್ನು ಶಾಶ್ವತವಾಗಿ ತೊಡೆದು ಹಾಕುವಲ್ಲಿ ಉಗ್ರಹೋರಾಟದ ಮೂಲಕ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಉತ್ತರಿಸಲಾಗುವುದು ಎಂದು ಅವರು ಗುಡುಗಿದರು.

ಮಾನಸಿಕ ಪರಿವರ್ತನೆಯ ಮೂಲಕ ಮದ್ಯ ತ್ಯಜಿಸುವವರ ನೈತಿಕತೆ ಹೆಚ್ಚಿಸಬೇಕೆಂಬ ಉದ್ದೇಶದಿಂದ ಖಾವಂದರು ಪ್ರಾರಂಭಿಸಿದ ಮದ್ಯವರ್ಜನ ಶಿಬಿರಗಳು ಈಗಾಗಲೇ ೨೬ ಜಿಲ್ಲೆಗಳಲ್ಲಿ ಯಶಸ್ವಿಯಾಗಿದ್ದು, 892 ಶಿಬಿರಗಳಿಂದ ಸುಮಾರು 74,300 ಜನ ಮದ್ಯಮುಕ್ತರಾಗಿ ತಮ್ಮ ಕುಟುಂಬದವರೊಡನೆ ಹೊಸಜೀವನ ನಡೆಸುತ್ತಿದ್ದಾರೆ. ಇದನ್ನು 30 ಜಿಲ್ಲೆಗಳಿಗೆ ವಿಸ್ತರಿಸಿ ರಾಜ್ಯದ ಮೂಲೆ ಮೂಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಮದ್ಯಮುಕ್ತ ಗ್ರಾಮವಾಗಿಸುವ ಜೊತೆಗೆ ಸಮಾಜ ಸುಧಾರಣೆಯ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಎ.ಮಂಜು ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ದುಗ್ಗಮ್ಮ, ಉಪ್ಪುಂದ ದೇವಾಡಿಗ ಸಂಘದ ಗೌರವಾಧ್ಯಕ್ಷ ಜನಾರ್ದನ ದೇವಾಡಿಗ, ಖಂಬದಕೋಣೆ ವಲಯ ಜನಜಾಗೃತಿ ವೇದಿಕೆಯ ಅಧಯಕ್ಷ ನವೀನ್‌ಚಂದ್ರ ಉಪ್ಪುಂದ, ಕುಂದಾಪುರ ಧಗ್ರಾಯೋ ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ, ಕುಂದಾಪುರ ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಉಪಸ್ಥಿತರಿದ್ದರು. ಶಿಬಿರಾಧಿಕಾರಿ ಮನೋಹರ್ ಬೆಳ್ತಂಗಡಿ ಪ್ರಾಸ್ತಾವಿಸಿ, ತಾಪಂ ಸದಸ್ಯ ಪ್ರಸನ್ನಕುಮಾರ್ ಸ್ವಾಗತಿಸಿದರು. ಮೇಲ್ವಿಚಾರಕ ನಿರಂಜನ್ ಎಂ.ಆರ್. ನಿರೂಪಿಸಿ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಗೋವಿಂದ ಎಂ ವಂದಿಸಿದರು.

– ಜನನಿ ಉಪ್ಪುಂದ

Leave a Reply

Your email address will not be published. Required fields are marked *

2 × 4 =