ಮನ್ ಕಿ ಬಾತ್ ಬದಲು ಕಾಮ್ ಕಿ ಬಾತ್ ಬಗ್ಗೆ ಪ್ರತಿಕ್ರಿಯಿಸಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಳೆದ ಲೋಕಸಭಾ ಚುನಾವಣಾ ಸಂದರ್ಭ ತಮ್ಮ ಬಣ್ಣದ ಮತುಗಳಿಂದ ಜನರನ್ನು ಮೋಡಿ ಮಾಡಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದು, ಅವರು ಮನ್ ಕಿ ಬಾತ್ ಬದಲು ಕಾಮ್ ಕಿ ಬಾತ್ ಬಗ್ಗೆ ಪ್ರತಿಕ್ರೀಯಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Call us

Call us

Visit Now

ನಾಗೂರು ಮೈದಾನದಲ್ಲಿ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಗುರುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ನರೇಂದ್ರ ಮೋದಿ ನೀಡಿದ ಯಾವ ಭರವಸೆಯೂ ಈಡೇರಿಲ್ಲ. ಅವರು ಹೇಳುವ ಅಚ್ಛೇದಿನ್ ಬಂದಿಲ್ಲ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ದಿನಬಳಕೆಯ ಸಾಮಗ್ರಿ ಬೆಲೆ ಗಗನಕ್ಕೇರಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ. ರಫೆಲ್ ಹಗರಣ ಅವರನ್ನು ಸುತ್ತಿಕೊಂಡಿದೆ. ದೇಶ ಆರ್ಥಿಕ ಪರಿಸ್ಥತಿ ತೀರ ಹದಗೆಟ್ಟಿದೆ. ಬಿಜೆಪಿ ಸರ್ಕಾರದಡಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುವಂತಾಗಿದೆ ಎಂದರು.

Click Here

Click here

Click Here

Call us

Call us

ರಾಜ್ಯದ ಎಲ್ಲ ವರ್ಗ, ಜಾತಿಯ ಜನರಿಗೆ, ಮಹಿಳೆಯರಿಗೆ ನ್ಯಾಯ ನೀಡುವ ಕೆಲಸ ಕಾಂಗ್ರೆಸ್ ಆಡಳಿತದ ಐದು ವರ್ಷಗಳ ಅವಧಿಯಲ್ಲಿ ಆಗಿದೆ. ರೈತರ ೮ ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆವು. ಈಗ ಕುಮಾರಸ್ವಾಮಿ ಮೈತ್ರಿ ಸರ್ಕಾರ ೪೦ ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದಾಗ ಸಾಲ ಮನ್ನಾ ಮಾಡಲು ತಮ್ಮ ಬಳಿ ನೋಟ್ ಮುದ್ರಿಸುವ ಯಂತ್ರ ಇಲ್ಲ ಅಂದಿದ್ದರು. ನಮ್ಮ ಅವಧಿಯಲ್ಲಿ ಭೀಕರ ಬರ ಇದ್ದಾಗ ವಿರೋಧ ಪಕ್ಷಗಳ ನಾಯಕರನ್ನು ಕೂಡಿಕೊಂಡು ಪ್ರಧಾನಿ ಮೋದಿಯವರ ಬಳಿಗೆ ನಿಯೋಗ ಒಯ್ದು ರೈತರ ಸಹಕಾರಿ ಸಂಸ್ಥೆಗಳ ಸಾಲ ಮನ್ನಾ ಮಾಡುವೆ; ನೀವು ಬ್ಯಾಂಕ್‌ಗಳಲ್ಲಿರುವ ಸಾಲ ಮನ್ನಾ ಮಾಡಿ ಎಂದರೆ ಅವರು ಒಪ್ಪಲಿಲ್ಲ. ವಿರೋಧ ಪಕ್ಷದ ನಾಯಕರು ಅವರ ಎದುರು ತುಟಿಬಿಚ್ಚಲಿಲ್ಲ. ಆದರೆ ಮೋದಿಯವರು ದೇಶದ ಕೆಲವೇ ಬಂಡವಾಳಶಾಹಿಗಳ ೨ ಲಕ್ಷ ೩೮ ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರು. ಇಂತವರಿಂದ ಬಡವರಿಗೆ ಸಹಾಯ ಆಗುವುದೆ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.

ಹಿಂದೆ ಭಾರತೀಯ ಜನತಾ ಪಕ್ಷದ ನಾಯಕರ ಮೋಡಿಯ ಮಾತಿಗೆ ಜನರು ಬಲಿಯಾಗಿ ಇಂದು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳು ಈ ಕ್ಷೇತ್ರದಲ್ಲಿ ತಾಂಡವವಾಡುತ್ತಿವೆ. ಈ ಭಾಗದ ಸಂಸದರಾಗಿ ಯಡಿಯೂರಪ್ಪನವರು ಇಲ್ಲಿನ ಜನರ ಸಂಕಷ್ಟಗಳನ್ನು ಆಲಿಸಿಲ್ಲ. ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ಕೂಡ ನೀಡಲಿಲ್ಲ. ಕ್ಷೇತ್ರದ ಜನರು ಇದೀಗ ಎಚ್ಚೆತ್ತುಕೊಂಡಿದ್ದಾರೆ. ಕೊಟ್ಟ ಭರವಸೆ ಈಡೇರಿಸದ ಬಿಜೆಪಿಯ ವಿರುದ್ದ ತಿರುಗಿಬಿದ್ದಿದ್ದಾರೆ. ಬಹಳ ಕಡಿಮೆ ಅವಧಿಯಲ್ಲೇ ಮೈತ್ರಿ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ರಾಜ್ಯದ ಜನರಿಗೆ ತೃಪ್ತಿ ಇದೆ. ದೇಶದ ಹಿತದೃಷ್ಟಿಯಿಂದ ಬಿಜೆಪಿ ತೊಲಗಬೇಕು. ಈ ಚುನಾವಣೆ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಆಗುವುದರಿಂದ ಈ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಅಭ್ಯರ್ಥಿ ಮಧು ಬಂಗಾರಪ್ಪ, ಕಾಂಗ್ರೆಸ್ ಧುರೀಣ ಎಂ. ಎ. ಗಫೂರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಗೋಪಾಲ ಭಂಡಾರಿ. ಕಾಂಗ್ರೆಸ್ ನಾಯಕ ಜಿ. ಎ. ಬಾವಾ ಮಾತನಾಡಿದರು.

ಉಸ್ತುವಾರಿ ಸಚಿವೆ ಡಾ. ಜಯಮಾಲಾ, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಎಸ್. ಎಲ್. ಬೋಜೇ ಗೌಡ, ಮಾಜಿ ಶಾಸಕ ಮಾಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಜೆಡಿಎಸ್ ಅಧ್ಯಕ್ಷ ಯೋಗೀಶ ಶೆಟ್ಟಿ, ಉಭಯ ಪಕ್ಷಗಳ ಧುರೀಣರು ಇದ್ದರು.

Leave a Reply

Your email address will not be published. Required fields are marked *

18 + four =