ಮರವಂತೆಯಲ್ಲಿ ವಿಶೇಷ ಗ್ರಾಮಸಭೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಾಂಧಿ ಜಯಂತಿ ಅಂಗವಾಗಿ ಮರವಂತೆ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ನಡೆಸಿತು. ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಅನಿತಾ ಆರ್. ಕೆ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.

Call us

Call us

Call us

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರವಂತೆಯನ್ನು ಸಂಪೂರ್ಣ ಸ್ವಚ್ಛ ಗ್ರಾಮವಾಗಿ ಪರಿವರ್ತಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸುಸಜ್ಜಿತ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗುತ್ತಿದೆ. ಅದೇ ವೇಳೆ ಗ್ರಾಮವು ಪ್ಲಾಸ್ಟಿಕ್‌ಮುಕ್ತ ಆಗಬೇಕಾಗಿದೆ. ಪ್ಲಾಸ್ಟಿಕ್ ಬಳಕೆಗೆ ಸರಕಾರ ಈಗಾಗಲೇ ನಿಷೇಧ ಹೇರಿದೆ. ಇದನ್ನು ವ್ಯಾಪಾರಸ್ಥರ ಮತ್ತು ಸಾರ್ವಜನಿಕರ ಗಮನಕ್ಕೆ ತಂದು ಅನುಷ್ಠಾನಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದರು. ಅಭಿವೃದ್ಧಿ ಅಧಿಕಾರಿ ಹರಿಶ್ಚಂದ್ರ ಆಚಾರ್ಯ ಸ್ವಾಗತಿಸಿ, ವಿಶೇಷ ಗ್ರಾಮಸಭೆಯ ಔಚಿತ್ಯವನ್ನು ವಿವರಿಸಿದರು. ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯರು, ಮಾಜಿ ಅಧ್ಯಕ್ಷ ಎಂ. ನರಸಿಂಹ ಶೆಟ್ಟಿ, ಇತರರು ಇದ್ದರು.

Call us

Call us

Leave a Reply

Your email address will not be published. Required fields are marked *

19 + six =