ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿಗೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ನಾವುಂದ ಇದರ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

Call us

Call us

ಈ ಸಂದರ್ಭದಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಎಂ. ವಿನಾಯಕ ರಾವ್, ರಾಮಕೃಷ್ಣ ಖಾರ್ವಿ, ನಾಗಮ್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ರಘುರಾಮ ಶೆಟ್ಟಿ, ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಶಿವರಾಮ ಯಡ್ತರೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

seven − five =