ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2019-20ನೇ ಸಾಲಿನ ಪ್ರೋತ್ಸಾಹಕ ಬಹುಮಾನ ಲಭಿಸಿದೆ.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಪರವಾಗಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಅಳ್ವೆಗದ್ದೆ ಗೌರವ ಸ್ವೀಕರಿಸಿದರು. ಈ ಸಂದರ್ಭ ಸಹಕಾರಿ ಸಂಘಗಳ ಉಪ ನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ. ಜಿ. ರಾಜಾರಾಮ ಭಟ್, ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರುಗಳಾದ ವಿನಾಯಕ ರಾವ್, ನರಸಿಂಹ ದೇವಾಡಿಗ, ಸಿಬ್ಬಂದಿ ಜಯರಾಮ ಮೊದಲಾದವರು ಉಪಸ್ಥಿತರಿದ್ದರು.