ಮಹಾತ್ಮರ ಉದಾತ್ತ ಚಿಂತನೆ ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ: ಶಾಸಕ ಗೋಪಾಲ ಪೂಜಾರಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನರಿಗೆ ಎಲ್ಲಾ ಸೌಕರ್ಯಗಳೂ ಸುಲಭದಲ್ಲಿ ದೊರೆಯುವಂತೆ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ಅವರ ಗ್ರಾಮೀಣ ಭಾರತದ ಕನಸು ನನಸಾಗಿಸಲು ನಿರಂತರವಾಗಿ ಶ್ರಮಿಸಬೇಕಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ಹೇಳಿದರು.

Call us

Call us

Click Here

Visit Now

ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಮಾಜಿ ಪ್ರಧಾನ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಪಣೆಗೈದು ಬಳಿಕ ಮಾತನಾಡಿದರು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರಂತಹ ನಾಯಕರ ಉದಾತ್ತ ಚಿಂತನೆಗಳು ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಅದ ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡುವಂತದ್ದು ಎಂದರು.

Click here

Click Here

Call us

Call us

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ. ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ್ ಉಪ್ಪುಂದ ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ ವಂದಿಸಿದರು.

 

Leave a Reply

Your email address will not be published. Required fields are marked *

19 − six =