ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೦-೨೧ನೇ ಸಾಲಿನ ಮಹಾಸಭೆಯು ಗಂಗೊಳ್ಳಿಯ ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣ ನಡೆಯಿತು.

Click here

Click Here

Call us

Call us

Visit Now

Call us

Call us

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ, ಸಂಘವು ವರದಿ ವರ್ಷದಲ್ಲಿ ಒಟ್ಟು ೪೦೨೧ ಸದಸ್ಯರೊಂದಿಗೆ ೧೯.೧೭ ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ ೧೧.೦೯ ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಸುಮಾರು ೩.೭೯ ಕೋಟಿ ರೂ.ಗಳನ್ನು ಇತರ ಸಂಘ, ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರದಿ ವರ್ಷದಲ್ಲಿ ಆಡಿಟ್ ವರದಿಯಲ್ಲಿ ಎ ವರ್ಗ ಬಂದಿದ್ದು, ವರದಿ ವರ್ಷಾಂತ್ಯಕ್ಕೆ ಸಂಘವು ೧೧,೮೨,೯೭೬.೦೦ ರೂ. ನಿವ್ವಳ ಲಾಭ ಗಳಿಸಿದೆ. ೨೦೨೦-೨೧ರ ಸಾಲಿನಲ್ಲಿ ಸದಸ್ಯರಿಗೆ ಶೇ.೧೦ ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಣಪತಿ ಖಾರ್ವಿ ೨೦೨೧-೨೦೨೨ನೇ ಸಾಲಿನ ಆಯ-ವ್ಯಯ ಅಂದಾಜು ಬಜೆಟ್ ಹಾಗೂ ೨೦೨೦-೨೧ನೇ ಸಾಲಿನ ಲಾಭಾಂಶ ವಿಂಗಡನೆಯನ್ನು ಮಂಡಿಸಿ ಕಾರ್ಯಕ್ರಮ ನಿರ್ವಹಿಸಿದರು.

ಸಂಘದ ಉಪಾಧ್ಯಕ್ಷೆ ಶೈಲಾ ಎಂ. ಖಾರ್ವಿ, ನಿರ್ದೇಶಕಿಯರಾದ ಸುಶೀಲಾ ಎ. ಖಾರ್ವಿ, ಶಾರದಾ ಆರ್. ಹೆಗ್ಡೆ, ಸುರೇಖಾ ಎನ್ ಕಾನೋಜಿ, ಜಯಂತಿ ಆರ್. ಪಠೇಲ್, ರೇಖಾ ಜಿ. ಖಾರ್ವಿ ಉಪಸ್ಥಿತರಿದ್ದರು. ನಿರ್ದೇಶಕಿ ಶಾರದಾ ಎಸ್. ಖಾರ್ವಿ ಸ್ವಾಗತಿಸಿದರು, ಸುನೀತಾ ಪ್ರಶಾಂತ ಖಾರ್ವಿ ಪ್ರಾರ್ಥನೆ ಹಾಡಿದರು. ಸಂಘದ ನಿರ್ದೇಶಕಿ ಅನಿತಾ ವಿ. ಖಾರ್ವಿ ವಂದಿಸಿದರು.

Call us

Leave a Reply

Your email address will not be published. Required fields are marked *

one × 4 =