ಮಹಿಳಾ ಕೃಷಿಕೂಲಿಕಾರರ ಪ್ರತಿಭಟನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಮಹಿಳಾ ಕೃಷಿ ಕೂಲಿಕಾರರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುಂದಾಪುರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಕುಂದಾಪುರ ಮಿನಿ ವಿಧಾನಸೌಧದ ಎದುರು ಪ್ರತಿಭಟನೆಯನ್ನು ನಡೆಯಿತು.

Call us

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಕುಂದಾಪುರ ಘಟಕದ ಅಧ್ಯಕ್ಷ ಮಾತನಾಡಿ, ಸಮಾನ ಕೆಲಸಕ್ಕೆ ಸಮಾನ ಕೂಲಿ ಮತ್ತು ಲಿಂಗ ಅಮಾನತೆಯನ್ನು ಹೋಗ ಲಾಡಿಸಲು ಕ್ರಮ ತೆಗೆದುಕೊಳ್ಳಬೇಕು, ಕೃಷಿ ಕೂಲಿಕಾರರಿಗೆ ಪಿಂಚಣಿ ಮತ್ತು ಕಲ್ಯಾಣ ಮಂಡಳಿ ರಚನೆಯಾಗಬೇಕು, ಬ್ಯಾಂಕ್‌ ಸಾಲ ಮತ್ತು ಮಹಿಳಾ ಸಬಲೀಕರಣದ ಎಲ್ಲ ಸವಲತ್ತುಗಳನ್ನು ಮಹಿಳಾ ಕೂಲಿಕಾರರಿಗೆ ತಲುಪಿಸಲು ಕ್ರಮ ವಹಿಸಬೇಕು ಹೀಗೆ ಸುಮಾರು 33 ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ಇಂದು ಬೇಡಿಕಾ ದಿನಾಚರಣೆಯನ್ನು ನಡೆ ಸುತ್ತಿದ್ದು ಈ ಬೇಡಿಕೆಗಳನ್ನು ತತ್‌ಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.

Call us

ಈ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರತ್ನಾ ನಾಡ, ಕೋಶಾಧಿಕಾರಿ ಪದ್ಮಾವತಿ ಶೆಟ್ಟಿ, ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸಂಚಾಲಕಿ ಶೀಲಾವತಿ, ಸಿಪಿಎಂ ಮುಖಂಡರಾದ ಕೆ. ಶಂಕರ್‌, ದಾಸ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಮಹಿಳಾ ಕೃಷಿ ಕೂಲಿಕಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕುಂದಾಪುರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳವರಿಗೆ ಮನವಿಯನ್ನು ನೀಡಲಾಯಿತು.

 

Leave a Reply

Your email address will not be published. Required fields are marked *

thirteen + five =