ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗುವತ್ತ ಗಮನಹರಿಸಿ: ಶೋಭಾಲಕ್ಷ್ಮೀ ಎಚ್. ಎಸ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ವಿದ್ಯಾರ್ಜನೆಗೆ ಬಡವ ಶ್ರೀಮಂತ ಎಂಬ ಬೇಧವಿಲ್ಲ. ವಿದ್ಯಾರ್ಥಿಗಳು ಶಿಸ್ತಿನ ಜೀವನವನ್ನು ಅಳವಡಿಸಿಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗುವತ್ತ ಗಮನಹರಿಸಬೇಕು ಎಂದು ಬೈಂದೂರು ತಹಶೀಲ್ದಾರ ಶೋಭಾ ಲಕ್ಷ್ಮೀ ಎಚ್ ಎಸ್ ಹೇಳಿದರು.

Click here

Click Here

Call us

Call us

Visit Now

Call us

Call us

ಗುರುವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ POSH ACT-2013 ಮತ್ತು ಮಹಿಳಾ ಸಬಲೀಕರಣ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು.

ಎನ್ನೆಸ್ಸೆಸ್ ಯೋಜನಾಧಿಕಾರಿ ಲತಾ ಪೂಜಾರಿ POSH ACT-2013 ಬಗ್ಗೆ ಮಾಹಿತಿ ನೀಡಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಗೀತಾಂಜಲಿ ಬಿ. ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವತ್ಥ್ ಡಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕರಾದ ಮೋಹನ್ ಕುಮಾರ್ ಹಾಗೂ ಶಿವಕುಮಾರ್ ಪಿ ವಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ರಮ್ಯ ನಾಯ್ಕ್ ವಂದಿಸಿದರು.

Leave a Reply

Your email address will not be published. Required fields are marked *

five + 8 =