ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಸಂಘಗಳು ರಹದಾರಿ: ಎಸ್. ರಾಜು ಪೂಜಾರಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಹಿಳೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದರೆ ಸಮಾಜ ಪ್ರಗತಿ ಕಾಣುತ್ತದೆ. ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವುದರೊಂದಿಗೆ ಪರಸ್ಪರ ಸಹಕಾರ ಮನೋಭಾವದಿಂದ ಜೀವನ ನಡೆಸಬೇಕಿದೆ. ಮಹಿಳಾ ಸಹಕಾರಿ ಸಂಘಗಳ ಸ್ಥಾಪನೆಯ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಶ್ಲಾಘನೀಯ. ಸಹಕಾರಿ ಸಂಘಗಳು ಮಹಿಳೆಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವತ್ತ ಗಮನಹರಿಸಬೇಕು ಹಾಗೂ ಸಂಘವನ್ನು ವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸಿ ಸಹಕಾರಿ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಾಗಬೇಕು ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು.

Click Here

Call us

Call us

Visit Now

ಅವರು ಕೊಡಪಾಡಿಯ ಪಾಂಡುರಂಗ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭವಾಗಿರುವ ಮಾರಿಕಾಂಬಾ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

Click here

Click Here

Call us

Call us

ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ನಾರಾಯಣ ಕೆ., ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ ನಾಯ್ಕ್, ಕುಂದಾಪುರದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ ಎಂ.ಜೆ., ಹೆಮ್ಮಾಡಿ ಪ್ರಗತಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸಾಧು ಬಿಲ್ಲವ, ಎಸ್‌ಸಿಡಿಸಿಸಿ ಬ್ಯಾಂಕಿನ ತ್ರಾಸಿ ಶಾಖೆಯ ವ್ಯವಸ್ಥಾಪಕ ನಾಗ ಮತ್ತಿತರರು ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ಮಂಜುಳಾ ದೇವಾಡಿಗ ಸ್ವಾಗತಿಸಿದರು. ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾಸ್ಕರ ಗಾಣಿಗ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

sixteen − 9 =