ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತುತ ಸಾಲಿನ ಮಿಲಿಟರಿ ಪಿಂಚಣಿದಾರ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಆಗಸ್ಟ್ 17ರ ನಂತರ ಅರ್ಜಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಂದ ಪಡೆಯಬಹುದಾಗಿದೆ. ಇಂದರಿಂದ ಅಚಿತಿಮ ವರ್ಷದ ಪದವಿ/ಡಿಪ್ಲೊಮೋ ವರೆಗೆ ಅರ್ಜಿ ಸ್ವೀಕರಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ವೃತಿಪರ ವ್ಯಾಸಾಂಗ ಮಾಡುತ್ತಿರುವವರಿಗೆ ಅರ್ಜಿ ಸ್ವೀಕರಿಸಲು ನವೆಂಬರ್ 30ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

4 − two =