ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ರೋವರ್ ರೇಂಜರ್ ಘಟಕ ಹಾಗೂ ಬೈಂದೂರು ಪೋಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮಾದಕ ವಸ್ತುಗಳ ನಿಷೇಧ ಅರಿವು ಪ್ರಯುಕ್ತ ಬೈಂದೂರು ಪೇಟೆಯಲ್ಲಿ ಜಾಥಾ ನಡೆಯಿತು. ಬೈಂದೂರು ವೃತ್ತ ನಿರೀಕ್ಷಕ ರಾಘವ ಎಸ್. ಪಡೀಲ್ ಜಾಥಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಮಾದಕ ವಸ್ತುಗಳಿಗೆ ಬಲಿಯಾಗದೇ ತಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಮಾದಕ ವಸ್ತುಗಳ ನಿಷೇಧದ ಬಗ್ಗೆ ಅರಿವು ಮೂಡಿಸುವ ಬಗ್ಗೆ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವಿಚಂದ್ರ, ಉಪನ್ಯಾಸಕರಾದ ವಿನೋದ್, ನಾಗರಾಜ ಶೆಟ್ಟಿ, ನವೀನ್ ಉಪಸ್ಥಿತರಿದ್ದರು. ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ. ಎನ್. ಹಾಗೂ ಸಿಬ್ಬಂದಿ ವರ್ಗದವರು ಜಾಥಕ್ಕೆ ಸಹಕರಿಸಿದರು.
ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯ ವತಿಯಿಂದ ಹಕ್ಲಾಡಿಯ ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ಸೇವನೆ ಅರಿವು ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಂಗವಾಗಿ ಹಕ್ಲಾಡಿ, ಹೊಳೆಮೊಗ್ಗೆ ಮತ್ತು ಕುಂದಬಾರಂದಾಡಿ ಮೊದಲಾದ ಕಡೆಗಳಲ್ಲಿ ಶಾಲೆಯ ವಿದ್ಯಾರ್ಥಿಗಳ ಜಾಥಾ ನಡೆಯಿತು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ನಡೆಸಿದರು. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸ್ಸೈ ಸುಬ್ಬಣ್ಣ, ಶಾಲೆಯ ಮುಖ್ಯ ಶಿಕ್ಷಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸುಜಯೀಂದ್ರ ಹಂದೆ, ಎನ್ನೆಸ್ಸೆಸ್ ಅಧಿಕಾರಿ ನಾರಾಯಣ ಇ.ನಾಯ್ಕ್, ಪೊಲೀಸ್ ಸಿಬ್ಬಂದಿಗಳಾದ ಗಿರೀಶ್, ರವಿಚಂದ್ರ, ಸಲೀಂ, ಶಾಲೆಯ ಶಿಕ್ಷಕರು ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.