ಮಾದರಿ ಸಂಸ್ಥೆಯಾಗಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2018-19ನೇ ಸಾಲಿನಲ್ಲಿ 17.64 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

ಭಾನುವಾರ ಬೈಂದೂರಿನ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2018-19ನೇ ಸಾಲಿನಲ್ಲಿ ರೂ. 14.59 ಕೋಟಿ ಠೇವಣಿ ಹೊಂದಿದ್ದು 13.82 ಕೋಟಿ ಸಾಲ ನೀಡಿದೆ.

ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಪ್ರಗತಿ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸಂಸ್ಥೆ ’ಎ’ ತರಗತಿಯನ್ನು ಹೊಂದಿದೆ ಎಂದರು. ಜಿಲ್ಲೆಯಲ್ಲಿಯೇ ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುತ್ತಿರುವ ಹಿಂದೆ ಗ್ರಾಹಕರ ಸಹಕಾರ ಹಾಗೂ ನೌಕರರ ಶ್ರಮವಿದೆ ಎಂದರು.

ಶೇ. 100ರಷ್ಟು ವಸೂಲಾತಿ ಮಾಡಿರುವ ಸಂಸ್ಥೆಯ ಗೊಳಿಹೊಳೆ ಶಾಖೆಯ ಪ್ರಬಂಧಕ ರಾಘವೇಂದ್ರ ಹಾಗೂ ನಾವುಂದ ಶಾಖಾ ಪ್ರಬಂಧಕ ಶ್ರೀನಿವಾಸ್ ಅವರನ್ನು ಗೌರವಿಸಲಾಯಿತು. ಸೌಹಾರ್ದ ಸಹಕಾರಿಯ ವ್ಯಾಪ್ತಿಯಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಅಂತರಾಷ್ಟ್ರೀಯ ಯೋಗ ಸ್ವರ್ಧೆಯಲ್ಲಿ ಭಾಗವಹಿಸುತ್ತಿರುವ ಧನ್ವಿ ಪೂಜಾರಿ ಮರವಂತೆಗೆ ಧನಸಹಾಯ ವಿತರಿಸಲಾಯಿತು.

ಸಂಘದ ಉಪಾಧ್ಯಕ್ಷ ವಿನಾಯಕ ರಾವ್, ನಿರ್ದೇಶಕರುಗಳಾದ ಮಂಜು ಪೂಜಾರಿ ನಾವುಂದ, ರಾಮಕೃಷ್ಣ ಖಾರ್ವಿ, ಪ್ರಶಾಂತ್ ಪೂಜಾರಿ, ಶಿವರಾಮ ಪೂಜಾರಿ, ಅಣ್ಣಪ್ಪ ಪೂಜಾರಿ. ಶಂಕರ ಪೂಜಾರಿ, ಮಂಜುನಾಥ ಪೂಜಾರಿ, ಜಯಶೀಲ ವಿ. ರಾವ್, ಬೇಬಿ, ನಾಗರತ್ನ ಇದ್ದರು.

ಲಕ್ಷ್ಮೀನಾರಾಯಣ ವೈದ್ಯ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಸೀತಾರಾಮ ಮಡಿವಾಳ ವಾರ್ಷಿಕ ವರದಿ ವಾಚಿಸಿದರು. ನಾಗೂರು ಶಾಖಾ ಪ್ರಬಂಧಕ ನಾಗರಾಜ ಯಡ್ತರೆ ಧನಸಹಾಯದ ಪಟ್ಟಿ ವಾಚಿಸಿದರು. ಗೋಳಿಹೊಳೆ ಶಾಖಾ ಪ್ರಬಂಧಕ ರಾಘವೇಂದ್ರ ಧನ್ಯವಾದಗೈದರು. ಕಂಬದಕೋಣೆ ಶಾಖಾ ಪ್ರಬಂಧಕ ರಾಜೇಂದ್ರ ದೇವಾಡಿಗ ಸಹಕರಿಸಿದರು.

Leave a Reply

Your email address will not be published. Required fields are marked *

16 + 4 =