ಮಾ. 28: ಕೊಲ್ಲೂರು ಶ್ರೀಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ರಥೋತ್ಸವವು ಮಾ. 28ರಂದು ನಡೆಯಲಿದೆ. ಮಾ. 21ರಿಂದ ಮಾ. 30ರ ವರೆಗೆ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಪ್ರತಿದಿನ ಸಂಜೆ ಸ್ವರ್ಣಮುಖೀ ಸಭಾಭವನದಲ್ಲಿ ಆಯ್ದ ತಂಡಗಳಿಂದ ಭರತನಾಟ್ಯ, ಕೂಚುಪುಡಿ, ಭಕ್ತಿಗೀತೆ, ಶಾಸ್ತ್ರೀಯ ಸಂಗೀತ ಸಹಿತ ನೃತ್ಯ ಕಾರ್ಯಕ್ರಮ ನಡೆಯಲಿದೆ.

ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಕಲ ಸೌಲಭ್ಯ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ವಾಹನ ಸಂಚಾರ ಹಾಗೂ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಶುಚಿತ್ವಕ್ಕೆ ಆದ್ಯತೆ ನೀಡಲಾಗಿದ್ದು ತುರ್ತು ಸೇವೆಗೆ ಗಮನಹರಿಸಲಾಗಿದ್ದು ದೇಗುಲದ ವಸತಿಗೃಹಗಳನ್ನು ಭಕ್ತರಿಗಾಗಿ ಮೀಸಲಿಡಲಾಗಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್‌. ಹಾಲಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

sixteen − 3 =