ಕುಂದಾಪುರ: ಮುದ್ರಾ ಯೋಜನೆಯಡಿಯಲ್ಲಿ ಸಮಗ್ರ ಆರ್ಥಿಕತೆಯ ಪ್ರಗತಿಯು ಕೇಂದ್ರ ಸರಕಾರದ ಆಶಯವಾಗಿದೆ. ಪ್ರಸಕ್ತ ಸಾಲಿನ ಅಂತ್ಯದೊಳಗೆ ಕೇಂದ್ರ ಸರಕಾರದ ಆದೇಶದಂತೆ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಮುದ್ರಾ ಯೋಜನೆಯಡಿಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. ಕೇಂದ್ರ ಸರಕಾರದ ಯಾವುದೇ ಸಾಲ ಯೋಜನೆ ಅನುಷ್ಠಾನ ಮಾಡುವಲ್ಲಿ ಕೆನರಾ ಬ್ಯಾಂಕ್ ಮುಂಚೂಣಿಯಲ್ಲಿದೆ ಎಂದು ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಛೇರಿಯ ಸಹಾಯಕ ಮಹಾಪ್ರಬಂಧಕ ಇ.ಕೃಷ್ಣರಾಜ್ ಹೇಳಿದರು.
ಅವರು ಮಂಗಳವಾರ ಕೆನರಾ ಬ್ಯಾಂಕ್ ನೇರಳಕಟ್ಟೆ ಶಾಖೆ ವತಿಯಿಂದ ನೇರಳಕಟ್ಟೆ ಶಾಖೆಯ ವಠಾರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಮುದ್ರಾ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಸಾಲ ಮಂಜೂರು ಪತ್ರ ವಿತರಿಸಿ ಮಾತನಾಡಿದರು.
ಸಾರಿಗೋದ್ಯಮಿ ಸುಧಾಕರ ಶೆಟ್ಟಿ ಬಾಂಡ್ಯ, ಉದ್ಯಮಿ ಚೆರಿಯಬ್ಬ ಸಾಹೇಬ್, ಪ್ರಸಿದ್ಧ ಜ್ಯೋತಿಷಿ ನೇರಳಕಟ್ಟೆ ಶಂಕರ ಪೈ, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕಕುಮಾರ್ ಕೊಡ್ಗಿ ಮೊದಲಾದವರು ಉಪಸ್ಥಿತರಿದ್ದು, ಶುಭ ಹಾರೈಸಿದರು. ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.
ಶಾಖಾ ಪ್ರಬಂಧಕ ಸತೀಶಬೀಡು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಫೀಸರ್ ಪ್ರಭಾಕರ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ವಂದಿಸಿದರು.