ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ: 12ನೇ ಪದವಿ ಪದಗ್ರಹಣ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿಗೆ ಸಮೀಪದ ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12‌ನೇ ಪದವಿ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿ.ಟಿ.ಯು. ವಿಶ್ವವಿದ್ಯಾಲಯದ ಮಂಗಳೂರು ವಿಭಾಗದ ವಿಶೇಷ ಅಧಿಕಾರಿ ಡಾ.ಶಿವಕುಮಾರ ಅವರು, ಪದವೀಧರರಿಗೆ ಇರಬೇಕಾದ ಜವಾಬ್ದಾರಿ ಮತ್ತು ಉದ್ಯೋಗ ಅವಕಾಶಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ಧಾರ್ಥ ಜೆ.ಶೆಟ್ಟಿ, ಪದವೀಧರರಿಗೆ ಅಭಿನಂದನೆ ಸಲ್ಲಿಸಿದರಲ್ಲದೆ, ವಿದ್ಯಾರ್ಥಿಗಳು ತಾವು ಕಲಿತ ಸಂಸ್ಥೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ಪ್ರಾಂಶುಪಾಲ ಡಾ.ಜಿ.ಎಸ್.ಕಾಟಯ್ಯ, ಅಕಾಡೆಮಿಕ್ ನಿರ್ದೇಶಕ ಡಾ.ಚಂದ್ರ ರಾವ್ ಮದನೆ, ಕಾರ್ಯಕ್ರಮ ಸಂಯೋಜಕ ಪ್ರೊ.ಸತೀಶ್ ಅಂಸಾಡಿ ಇದ್ದರು.

ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುವ ವಿದ್ಯಾರ್ಥಿ ವೇತನ ಪಡೆದ ಪಡೆದ ಸಿವಿಲ್ ವಿಭಾಗದ ವಿದ್ಯಾರ್ಥಿನಿ ಛಾಯಾ ಅಭಿಪ್ರಾಯ ಹಂಚಿಕೊಂಡರು. ವಿದ್ಯಾರ್ಥಿಗಳಾದ ಹೇಮಂತ ಸ್ವಾಗತಿಸಿದರು, ವರ್ಷ ಹಾಗೂ ಡಿಯೋನಾ ನಿರೂಪಿಸಿದರು, ಲಕ್ಷ್ಮಿ ವಂದಿಸಿದರು.

Leave a Reply

Your email address will not be published. Required fields are marked *

3 + 10 =