ಮೂಡ್ಲಕಟ್ಟೆ ಎಂಐಟಿ: ಎಂಬಿಎ ವಿಧ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಯಿತು.

Click Here

Call us

Call us

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪ್ರತಿಷ್ಟಿತ ಕಂಪೆನಿಯಾದ ಸಿನೋಪಿಕ್ ಸಿಸ್ಟಮ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಸೌಜನ್ಯ ಕೆ ಆಗಮಿಸಿದ್ದರು.

Click here

Click Here

Call us

Visit Now

‘ಕ್ಯಾಂಪಸ್ ಟು ಕಾರ್ಪೊರೇಟ್ ‘ ಈ ವಿಷಯದ ಬಗ್ಗೆ ತಮ್ಮ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಕಂಪೆನಿಯಲ್ಲಿನ ವೃತ್ತಿ ಜೀವನದ ಕುರಿತು ವಿವರಿಸಿ, ಉದ್ಯೋಗ ಸಂದರ್ಶನಕ್ಕೆ ಹೇಗೆ ತಯಾರಾಗಬೇಕು ಎಂಬುದರ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ ಮಾತನಾಡಿ, ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ, ಸೋತಾಗ ಹೆದರದೆ ಅದನ್ನೇ ಗೆಲುವಿನ ಮೆಟ್ಟಿಲು ಎಂದು ತಿಳಿದು ಪರಿಶ್ರಮ ವಹಿಸಿ ಗೆಲುವಿನತ್ತ ಹೆಜ್ಜೆ ಹಾಕಬೇಕು ಎಂದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ಹೇಳಿದರು.

ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿಸೋಜಾ ಮಾತನಾಡಿ, ವಿಧ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಕಾಣಲು ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಈ ದಿಸೆಯಲ್ಲಿ ಪೋಷಕರು ಕಾಲೇಜಿನ ಜೊತೆ ಉತ್ತಮ ಬಾಂದವ್ಯ ಹೊದಿರಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.

Call us

ಇದೇ ಸಂಧರ್ಭದಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಡೀನ್, ವಿಭಾಗದ ಮುಖ್ಯಸ್ಥರು, ಸಿಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥೆ ಹಾಗೂ ಡೀನ್ ಪ್ರತಿಭಾ ಪಾಟಿಲ್ ಸ್ವಾಗತಿಸಿ ಸಹಾಯಕ ಪ್ರಾಧ್ಯಾಪಕಿ ಅಮೃತಮಾಲ ನಿರೂಪಿಸಿ, ಸಹಾಯಕ ಪ್ರಾಧ್ಯಾಪಕಿ ಕಾವ್ಯ ವಂದಿಸಿದರು.

Leave a Reply

Your email address will not be published. Required fields are marked *

3 × 2 =