ಮೂಡ್ಲಕಟ್ಟೆ ಎಂಐಟಿ: ಪ್ರಥಮ ವರ್ಷದ ಇಂಜಿನಿಯರಿಂಗ್ ವಿಧ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ನಡೆಯಿತು.

Click here

Click Here

Call us

Call us

Visit Now

Call us

Call us

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಆರ್.ಏನ್. ಶೆಟ್ಟಿ ಪಿಯು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು, ಪದವಿ ಜೊತೆಗೆ ಕ್ರಿಯಾಶೀಲರಾಗಿರುವುದನ್ನು ಕಲಿಯಬೇಕು. ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಶ್ರಮ ತ್ಯಾಗ ಪ್ರಾರ್ಥನೆ ಪ್ರಯತ್ನ ಇವನ್ನು ಸಮನಾಗಿ ಪ್ರಯೋಗಿಸಿದಾಗ ಯಶಸ್ಸು ಲಭ್ಯ ” ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ ಮಾತನಾಡಿ, ವಿಧ್ಯಾರ್ಥಿಗಳು ಜೀವನದಲ್ಲಿ ಉತ್ತಮವಾದ ಮೌಲ್ಯಗಳನ್ನು ಅಳವಡಿಸಿಕೊಂಡು ಗುರುಗಳು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ಹೇಳಿದರು.

ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾಮಾತನಾಡಿ, ವಿಧ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಕಾಣಲು ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಈ ದಿಸೆಯಲ್ಲಿ ಪೋಷಕರು ಕಾಲೇಜಿನ ಜೊತೆ ಉತ್ತಮ ಬಾಂದವ್ಯ ಹೊಂದಿರಬೇಕು ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಲೇಜಿನ ಅಕಾಡೆಮಿಕ್ ಡೀನ್ ಡಾ|ಪ್ರತಿಭಾ ಪಟೇಲ್ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿಕೊಟ್ಟರು.

ಇದೇ ಸಂಧರ್ಭದಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಡೀನ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಹಾಫ಼ೀಸ್ ಸ್ವಾಗತಿಸಿದರು, ಇರ್ಫ಼ಾನ್ ವಂದಿಸಿದರು, ವಿಧ್ಯಾರ್ಥಿನಿ ರೇಷ್ಮ ಅತಿಥಿಗಳನ್ನು ಪರಿಚಯಿಸಿದರು, ಆಶ್ರಿತ ಶೆಟ್ಟಿ ಹಾಗೂ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.

Call us

Leave a Reply

Your email address will not be published. Required fields are marked *

seventeen − 16 =