ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾರವರು ಯುಕ್ತ ಹೊಳ್ಳರವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿದರು.
ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇದೇ ಸಂಧರ್ಭದಲ್ಲಿ ಕಾಲೇಜಿನ ಡೀನ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲಕ್ಷ್ಮೀ ಸ್ವಾಗತಿಸಿ, ಡಿಯೋನ ವಂದಿಸಿದರು, ವರ್ಷ ಮತ್ತು ಸುಪ್ರಿಯ ಕಾರ್ಯಕ್ರಮ ನಿರೂಪಿಸಿದರು.