ಮೇಲ್‌ಗಂಗೊಳ್ಳಿ: ಡಾ. ಬಿ. ಆರ್. ಅಂಬೇಡ್ಕರ್ ಜನ್ಮದಿನಾಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಯುವಕ ಮಂಡಲಗಳ ನಿರಂತರ ಚಟುವಟಿಕೆ ನಡೆಸುತ್ತಾ ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸಮಾಜದ ಕಟ್ಟಕಡೆಯ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಗಂಗೊಳ್ಳಿಯ ಡಾ. ಬಿ. ಆರ್. ಯುವಕ ಮಂಡಲ, ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲಗಳು ಈ ನಿಟ್ಟಿನಲ್ಲಿ ಪರಿಸರದಲ್ಲಿ ಉತ್ತಮ ಕಾರ್ಯಚಟುವಟಿಕೆ ನಡೆಸುತ್ತಿರುವುದು ಶ್ಲಾಘನೀಯ. ಡಾ.ಅಂಬೇಡ್ಕರ್ ಅವರ ಆದರ್ಶ, ಧ್ಯೇಯೋದ್ದೇಶಗಳನ್ನು ಅಳವಡಿಸಿಕೊಂಡು ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.

Call us

Call us

ಗಂಗೊಳ್ಳಿ ಮೇಲ್‌ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಮೈದಾನದಲ್ಲಿ ಬುಧವಾರ ಜರಗಿದ ಮೇಲ್‌ಗಂಗೊಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲದ ೩೪ನೇ ವಾರ್ಷಿಕೋತ್ಸವ, ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲದ ೨೮ನೇ ವಾರ್ಷಿಕೋತ್ಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೦ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Call us

Call us

ಗಂಗೊಳ್ಳಿ ಟಔನ್ ಸೌಹಾರ್ದ ಸಹಕಾರಿಯ ನಿರ್ದೇಶಕ ಬಿ.ರಾಘವೇಂದ್ರ ಪೈ ಶುಭಾಶಂಸನೆಗೈದರು. ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ಚಿದಾನಂದ ಮತ್ತು ಗಂಗೊಳ್ಳಿ ೨೪x೭ ಅಂಬುಲೆನ್ಸ್‌ನ ಮಹಮ್ಮದ್ ಇಬ್ರಾಹಿಂ ಎಂ.ಎಚ್. ಹಾಗೂ ಕಲಾವಿದ ಗಣೇಶ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ೧೨ ಮಂದಿ ಆಶಾ ಕಾರ್ಯಕರ್ತರು, ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳನ್ನು ಮತ್ತು ಆರೋಗ್ಯ ಕವಚ (೧೦೮ ಅಂಬುಲೆನ್ಸ್) ಸಿಬ್ಬಂದಿಗಳನ್ನು ಗೌರವಿಸಲಾಯಿತು. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಆಶಾ ಕಾರ್ಯಕರ್ತೆ ಕಲ್ಪನಾ ಶೇರುಗಾರ್ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಅರ್ಚನಾ ಮಹಿಳಾ ಮಂಡಲದ ಅಧ್ಯಕ್ಷೆ ಅಕ್ಕಮ್ಮ ಯು.ಕುಮಾರ್ ಮತ್ತು ಅಮೃತಾ ಯುವತಿ ಮಂಡಲದ ಅಧ್ಯಕ್ಷೆ ವೇದಾವತಿ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ಅಕ್ಷಯ್ ಎಸ್. ಸ್ವಾಗತಿಸಿದರು. ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯುವತಿ ಮಂಡಲದ ಕಾರ್ಯದರ್ಶಿ ಅನಿತಾ ವರದಿ ವಾಚಿಸಿದರು. ಸಹನಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸರಸ್ವತಿ ಸನ್ಮಾನಿತರನ್ನು ಪರಿಚಯಿಸಿದರು. ಗಣೇಶ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಕಾರ್ಯದರ್ಶಿ ಶಶಿದೀಪ ಕೆ. ವಂದಿಸಿದರು.

Leave a Reply

Your email address will not be published. Required fields are marked *

twelve + 11 =