ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಠೇವಣಿದಾರರಿಗೆ ಸೂಚನೆ

ಮೂಲ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅನುವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಮೇ 6: ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಅಂಗ ಸಂಸ್ಥೆಗಳು ಸಾರ್ವಜನಿಕರಿಂದ ವಿವಿಧ ರೀತಿಯ ಠೇವಣಿಗಳನ್ನು ಸಂಗ್ರಹಿಸಿದ್ದು ಅವುಗಳ ನಿಗಧಿತ ಅವಧಿ ಮುಗಿದ ನಂತರ ಅದರ ಹೂಡಿಕೆದಾರರಿಗೆ ಹಿಂತಿರುಗಿಸದೆ ವಂಚಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಈ ವಂಚಿತ ಸಂಸ್ಥೆಯ ಆಸ್ತಿಯನ್ನು ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಸಂರಕ್ಷಣಾ ಕಾಯ್ದೆಯಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದು, ಹರಾಜು ಪ್ರಕ್ರಿಯೆಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿರುತ್ತದೆ. ನ್ಯಾಯಾಲಯದ ಆದೇಶದಂತೆ ಹರಾಜಿನಿಂದ ಬಂದ ಹಣವನ್ನು ಠೇವಣಿದಾರರಿಗೆ ವಿತರಿಸಲು ನ್ಯಾಯಾಲಯಕ್ಕೆ ಠೇವಣಿದಾರರ ವಿವರಗಳನ್ನು ಸಲ್ಲಿಸಬೇಕಾಗಿರುತ್ತದೆ.

ಆದ್ದರಿಂದ ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಮತ್ತು ಅದರ ಅಂಗ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವ ಠೇವಣಿದಾರರು ಅವರ ಠೇವಣಿಗಳಿಗೆ ಸಂಬಂಧಿಸಿದಂತೆ ಸದರಿ ಸಂಸ್ಥೆಯವರು ನೀಡಿರುವ ಬಾಂಡ್/ಪಾಸ್ ಪುಸ್ತಕ ಇತ್ಯಾದಿ ಮೂಲ ದಾಖಲೆಗಳೊಂದಿಗೆ ಅರ್ಜಿಗಳನ್ನು ೩೦ ದಿನಗಳ ಒಳಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯ ನಂತರ ಬಂದ ಕೋರಿಕೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕೋಲಾರದ ಸಹಾಯಕ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

1 × three =