ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸಾಧಕರಿಗೆ ಮಂಗಳವಾರ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಂಬಳ ಕ್ರೀಡೆಯಲ್ಲಿ ದಾಖಲೆ ಮಾಡಿದ ನಾಯ್ಕನಕಟ್ಟೆಯ ವಿಶ್ವನಾಥ ದೇವಾಡಿಗ ಮತ್ತು ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಬಹುಮಾನಗಳಿಸಿದ ನಿರೀಕ್ಷಾ ಅರೆಹೊಳೆ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮರವಂತೆ ಬಡಾಕೆರೆ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ್, ಜಗದೀಶ ಪೂಜಾರಿ, ಎಂ. ವಿನಾಯಕ ರಾವ್, ನರಸಿಂಹ ದೇವಾಡಿಗ, ರಾಮೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ, ಸರೋಜಾ ಗಾಣಿಗ, ಅಶೋಕಕುಮಾರ ಶೆಟ್ಟಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಶಿವರಾಮ ಇದ್ದರು.