ಯಕ್ಷಗಾನ, ಜನಪದ ಸಂಗೀತದ ಮೂಲಕ ಚುನಾವಣಾ ಜಾಗೃತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್‌ಗಳಲ್ಲಿ ನಡೆಯಲಿದ್ದು, ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು, ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ, ಯಕ್ಷಗಾನ ಮತ್ತು ಜನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಲಾಗುತ್ತಿದೆ.

Click Here

Call us

Call us

ಉಡುಪಿಯ ಶ್ರೀ ಸುಬ್ರಹ್ಮಣ್ಯ ಯಕ್ಷಗಾನ ಕಲಾ ಮಂಡಳಿ ತಂಡದ ಕಲಾವಿದರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಕುರಿತಂತೆ ಅರಿವು ಮೂಡಿಸುತ್ತಿದ್ದು, ಗ್ರಾಮಸ್ಥರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೇ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅರ್ಹ ವ್ಯಕ್ತಿಗೆ ಮತ ಹಾಕುವುದರ ಮೂಲಕ ಅವರನ್ನು ಆಯ್ಕೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ.

Click here

Click Here

Call us

Visit Now

ಅನರ್ಹ ವ್ಯಕ್ತಿಗೆ ಮತ ಚಲಾಯಿಸಿದರೆ ಅದರ ಪರಿಣಾಮ ಏನಾಗಲಿದೆ, ಅರ್ಹ ವ್ಯಕ್ತಿಗೆ ಮತ ಚಲಾಯಿಸುವುದರಿಂದ ಅಗುವ ಪ್ರಯೋಜನಗಳ ಕುರಿತು, ಯಕ್ಷಗಾನ ರೂಪಕದಲ್ಲಿ ಕಥೆಯನ್ನು ಸಿದ್ಧಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನ ನೀಡುತ್ತಿದ್ದಾರೆ.

ಇದರೊಂದಿಗೆ ಗಾನ ಲಹರಿ ಬಳಗ, ಕೋಟೇಶ್ವರ ತಂಡದ ಸದಸ್ಯರೂ ಸಹ ಜನಪದ ಗೀತೆಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

eleven − seven =