ಯಡಬೆಟ್ಟು: ಹಡಿಲು ಬಿದ್ದಿದ್ದ ಕೃಷಿ ಭೂಮಿಗೆ ಬೆಂಕಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿಗೆ ಸಮೀಪದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿ ಹಡೋಲು ಬಿದ್ದಿದ್ದ ಏಳು ಎಕರೆ ಕೃಷಿ ಭೂಮಿಗೆ ಬೆಂಕಿ ಬಿದ್ದಿದ್ದು ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡೆಬೇಕಾಯಿತು.

Click Here

Call us

Call us

Visit Now

ಸಂಜೆ 5 ಗಂಟೆರ ಸುಮಾರು ಚಿಕ್ಕದಾಗಿ ಕಾಣಿಸಿಕೊಂಡ ಬೆಂಕಿ ಗಾಳಿಗೆ ಮೆಲ್ಲನೆ ಹಬ್ಬಿ, ಯಡಬೆಟ್ಟು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯವರೆಗೆ ಸುಮಾರು 7 ಎಕರೆ ಜಾಗದವರೆಗೆ ಆಕ್ರಮಿಸಿತ್ತು. ಅಷ್ಟು ಜಾಗದಲ್ಲಿದ್ದ ಒಣಗಿದ ಹುಲ್ಲು ಕಡ್ಡಿಗಳು ಇದ್ದುದರಿಂದ ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದನ್ನು ಗಮನಿಸಿ ಸ್ಥಳೀಯರು ಹಸಿ ಮರದ ಕೊಂಬೆಗಳ ಮೂಲಕ ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಕೂಡ, ಬೆಂಕಿ ನಿಧಾನವಾಗಿ ಮುಂದುವರಿಯುತ್ತಾ ಸಾಗಿತ್ತು. ಬಳಿಕ ಕುಂದಾಪುರ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಯಿಸಲಾಯಿತು. ಸುಮಾರು ಒಂದು ಗಂಟೆಗಳ ಹರಸಾಹಸದ ಬಳಿಕ ಬೆಂಕಿ ಸಂಪೂರ್ಣ ನಂದಿಸುವಲ್ಲಿ ಆಗ್ನಿಶಾಮಕ ಇಲಾಖೆ ಸಫಲವಾಯಿತು.

Click here

Click Here

Call us

Call us

ಘಟನಾಸ್ಥಳಕ್ಕೆ ಪಾಂಡೇಶ್ವರ ಪಂಚಾಯಿತಿ ಅಧ್ಯಕ್ಷ ಗೋವಿಂದ ಉಪಸ್ಥಿತರಿದ್ದ, ಸ್ವತಃ ಬೆಂಕಿ ನಂದಿಸುವ ಕಾರ‍್ಯದಲ್ಲಿ ಇಲಾಖೆಗೆ ಸಹಕರಿಸಿದರು. ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ನಾಗರಾಜ್ ಪೂಜಾರಿ, ಮುಸ್ತಾಫ, ಕೆ.ಎನ್. ಮೊಗೇರಾ, ರವೀಂದ್ರ ದೇವಾಡಿಗ, ಸಂತೋಷ ಶೆಟ್ಟಿ ಮತ್ತು ಉಡುಪಿ ಜಿಲ್ಲಾ ಪ್ರಭಾರ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಕಾರ‍್ಯಚರಣೆಯಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

four × one =