ರಂಗ ಸುರಭಿ ರಂಗ ತರಬೇತಿ ಶಿಬಿರ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಸಹಕಾರದಲ್ಲಿ ರಂಗ ನಿರ್ದೇಶಕ ಗಣೇಶ್ ಎಂ ನಿರ್ದೇಶನದಲ್ಲಿ ನಡೆಯುತ್ತಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವು ಯಳಜಿತ್‌ದ ಕಪ್ಸೆಯ ನಾರಾಯಣ ಉಡುಪರ ಮನೆಯ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಉಡುಪ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅತಿಥಿಗಳಾಗಿ ಬೈಂದೂರು ಶ್ರೀರಾಮ ಸೌಹಾರ್ದ ಕೋ-ಆಪರೇಟಿವ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಹಾಗೂ ರಂಗ ನಿರ್ದೇಶಕ ಗಣೇಶ ಮುಂಡಾಡಿ ಇದ್ದರು. ಸುರಭಿಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿ ನಿರ್ದೇಶಕ ಸುಧಾಕರ ಪಿ ಬೈಂದೂರು ಕಾರ್ಯಕ್ರಮ ನಿರೂಪಿಸಿದರು.

ಕೊನೆಯಲ್ಲಿ ರಂಗ ಶಿಬಿರದ ಸದಸ್ಯರಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೆ. ಶಿವರಾಮ ಕಾರಂತರ ಕಾದಂಬರಿಯಾದಾರಿತ ನಾಟಕ ಚೋಮನದುಡಿಯ ಪ್ರಾಥಮಿಕ ಪ್ರದರ್ಶನ ನಡೆಯಿತು.

Leave a Reply

Your email address will not be published. Required fields are marked *

eight − five =