ರತ್ತು ಬಾಯಿ ಜನತಾ ಪ್ರೌಢಶಾಲೆ: ಶಾಲಾ ಸರಕಾರದ ಪದಗ್ರಹಣ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು:
ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಸರಕಾರದ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Call us

Call us

ಬೈಂದೂರು ವಲಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಶಿರೂರು ಶಾಲಾ ಸಂಸತ್ತನ್ನು ಉದ್ಘಾಟಿಸಿ  ಮಾತನಾಡಿ, ಭಾರತದ ಭವ್ಯ ಭವಿಷ್ಯ ತರಗತಿ ಕೋಣೆಯಲ್ಲಿ ನಿರ್ಮಾಣವಾಗುತ್ತದೆ ಅದಕ್ಕೆ ಬೇಕಾದ ತರಬೇತಿಯನ್ನು ಮತ್ತು ಜ್ಞಾನವನ್ನು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ನೀಡುವುದು ಶಿಕ್ಷಣದ ಮುಖ್ಯ ದ್ಯೇಯವಾಗಿರಬೇಕು. ಮೊದಲು ತಂದೆ-ತಾಯಿಗಳಿಗೆ ಉತ್ತಮ ಮಕ್ಕಳಾಗಿ ಭವ್ಯ ಭಾರತದ ಪ್ರಜೆಗಳಾಗಿ ದೇಶ ಕಟ್ಟುವ ಹೊಣೆಗಾರಿಕೆಯನ್ನು ಎಳೆಮೆಯಲ್ಲಿಯೇ ಬೆಳೆಸಿಕೊಳ್ಳುವ ಅವಶ್ಯಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

Call us

Call us

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಆನಂದ ಮದ್ದೋಡಿ ವಹಿಸಿದ್ದರು. ಈ ಸಂದರ್ಭ ಶಿಕ್ಷಕರಾದ ಗುರುರಾಜ್. ಎಸ್. , ನಿರ್ಮಲಾ, ಹೇಮಾವತಿ ಹಾಗೂ ಸಿಬ್ಬಂದಿ ವರ್ಗದವರಾದ ಗಿರಿಜಾ, ಪಾರ್ವತಿ ಹಾಗೂ ವಿದ್ಯಾರ್ಥಿ ನಾಯಕ ಮಹೇಶ್.ಎಂ. ಉಪಸ್ಥಿತರಿದ್ದರು

ಶಾಲಾ ಸಂಸತ್ತಿನ ವಕ್ತಾರರಾದ ಚೈತ್ರಾ ಕಾರ್ಯಕ್ರಮದ ನಿರ್ವಹಿಸಿದರು. ಶಿಕ್ಷಕರಾದ ಚಂದ್ರ ಕೆ. ದೇವಾಡಿಗ ಸ್ವಾಗತಿಸಿ ಶಿಕ್ಷಕರಾದ ಶ್ರೀ ಪ್ರಕಾಶ್ ಅವರು ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

13 + six =