ರಾಷ್ಟ್ರವಿರೋಧಿಗಳಿಗೆ ರಾಜ್ಯ ಸರಕಾರ ರಕ್ಷಣೆ, ಮೋದಿ ಸರಕಾರದಿಂದ ದೇಶ ಅಭಿವೃದ್ಧಿ ಪಥದತ್ತ: ಬಿಎಸ್‌ವೈ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇಶಸೇವೆಯಲ್ಲಿ ತೊಡಗಿ ಪ್ರಾಣತ್ಯಾಗಗೈದ ಹುತಾತ್ಮರನ್ನು ಸ್ಮರಿಸುತ್ತಿರುವ ಸಂದರ್ಭದಲ್ಲಿ ದೇಶವಿರೋಧಿ ಘೋಷಣೆ ಕೂಗುವವರಿಗೆ ಪರೋಕ್ಷವಾಗಿ ರಾಜ್ಯ ಸರಕಾರ ಹೈಕಮಾಂಡ್ ಆದೇಶದಂತೆ ಬೆಂಬಲವಾಗಿ ನಿಂತಿದೆ. ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿ, ಕಿರುಕುಳ ನೀಡಿ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಇದು ಹೀಗೆಯೇ ಮುಂದುವರಿದರೇ ರಾಜ್ಯದಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ದಾರೆ.

Call us

Call us

ಶನಿವಾರ ಹೆಮ್ಮಾಡಿ ಜಯಶ್ರಿ ಸಭಾಂಗಣದಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಮಾವೇಶ, ಮಂಡಲಗಳ ಪದಗ್ರಹಣ ಹಾಗೂ ಬೈಂದೂರು ತಿರಂಗಾ ಯಾತ್ರೆ ಬೈಕ್ ರ‍್ಯಾಲಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಭಾರಿಗೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಿಸಿ ಯುವಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದೇಶಾದಾದ್ಯಂತ ತಿರಂಗಾ ಯಾತ್ರೆ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ಮೋದಿ ಕರೆ ನೀಡಿದ್ದು ಎಲ್ಲೆಡೆಯೂ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು.

ದೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ನರೇಂದ್ರ ಮೋದಿ ನೇತೃತ್ವದ ಸರಕಾರ ವಿಶ್ವವನ್ನು ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ. ಪ್ರಧಾನಿ ಮೋದಿ ದೇಶದ ಅನೇಕ ಜ್ವಾಲಂತ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅರವತ್ತು ವರ್ಷಗಳಲ್ಲಿ ಸಾಧ್ಯವಾಗದ ದೇಶದ ಅಭಿವೃದ್ಧಿ ಎರಡೂವರೆ ವರ್ಷಗಳಲ್ಲಿ ಸಾಧ್ಯವಾಗುತ್ತಿದೆ ಎನ್ನುವುದು ಕೇಂದ್ರಸರಕಾರದ ಕ್ಷಿಪ್ರ ಕಾರ್ಯವೈಖರಿಯನ್ನು ಸೂಚಿಸುತ್ತದೆ ಎಂದರು.

Call us

Call us

ಕರ್ನಾಟಕದ ಕಾಂಗ್ರೆಸ್ ಸರಕಾರದ ಆಳ್ವಿಕೆ ಸಾಕೆಂದು ಜನರೇ ಹೇಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರದಿಂದಲೂ ಸ್ವರ್ಧಿಸಲಿದ್ದು, ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆ ದಟ್ಟವಾಗುತ್ತಿದೆ. ಇದು ಸಕಾರಗೊಳ್ಳಬೇಕಿದ್ದರೇ, ಕಾರ್ಯಕರ್ತರು, ಮುಖಂಡರು ನಮ್ಮೊಳಗಿನ ವೈಮನಸ್ಸುಗಳನ್ನು ತೊರೆದು ಪಕ್ಷಸಂಘಟನೆಯಲ್ಲಿ ತೊಡಗಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಬಿಜೆಪಿ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ್, ಸದಸ್ಯರುಗಳಾದ ಸುರೇಶ್ ಬಟವಾಡಿ, ಶಂಕರ ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕರುಗಳಾದ ಕೆ. ಲಕ್ಷ್ಮೀನಾರಾಯಣ, ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಯಶಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ಬೈಂದೂರು ಯುವಮೋರ್ಚಾ ಅಧ್ಯಕ್ಷ ಶರತ್‌ಕುಮಾರ್ ಶೆಟ್ಟಿ, ತಾಪಂ ಸದಸ್ಯರು, ವಿವಿಧ ಮೋರ್ಚಾಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ಬ್ಲಾಕ್ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಕಾರ್ಯದರ್ಶಿ ದೀಪಕ್‌ಕುಮಾರ್ ಶೆಟ್ಟಿ ಧನ್ಯವಾದಗೈದರು. ಬಾಲಚಂದ್ರ ಭಟ್ ನಿರೂಪಿಸಿದರು.

????????????????????????????????????
????????????????????????????????????
????????????????????????????????????
????????????????????????????????????
????????????????????????????????????
????????????????????????????????????
????????????????????????????????????
????????????????????????????????????

????????????????????????????????????

????????????????????????????????????
????????????????????????????????????
????????????????????????????????????
????????????????????????????????????
????????????????????????????????????
????????????????????????????????????
????????????????????????????????????
????????????????????????????????????

news bjp tiranga yatra Shiruru to hemmady (11) news bjp tiranga yatra Shiruru to hemmady (12)news bjp tiranga yatra Shiruru to hemmady (13) news bjp tiranga yatra Shiruru to hemmady (14) news bjp tiranga yatra Shiruru to hemmady (15) news bjp tiranga yatra Shiruru to hemmady (16) news bjp tiranga yatra Shiruru to hemmady (17) news bjp tiranga yatra Shiruru to hemmady (18)news bjp tiranga yatra Shiruru to hemmady (23) news bjp tiranga yatra Shiruru to hemmady (19) news bjp tiranga yatra Shiruru to hemmady (20) news bjp tiranga yatra Shiruru to hemmady (21)news bjp tiranga yatra Shiruru to hemmady (24) news bjp tiranga yatra Shiruru to hemmady (25) news bjp tiranga yatra Shiruru to hemmady (26) news bjp tiranga yatra Shiruru to hemmady (27)

Leave a Reply

Your email address will not be published. Required fields are marked *

8 + 8 =