ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಎಸಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಮತ್ತು ಫ್ಲೈ ಓವರ್ ಕಾಮಗಾರಿ ಶೀಘ್ರ ಮುಗಿಸುವಂತೆ ಮತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಇಂದು ಕುಂದಾಪುರದ ಸಹಾಯಕ ಕಮೀಶನರ್ ಅವರಿಗೆ ಹೆದ್ದಾರಿ ಜಾಗೃತಿ ಹೋರಾಟ ಸಮಿತಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಸಹಾಯಕ ಕಮೀಶನರ್ ಅವರು ತಾನು ಪ್ರತಿ ವಾರದ ಕಾಮಗಾರಿಯ ವರದಿಯನ್ನು ತನಗೆ ಸಲ್ಲಿಸಬೇಕೆಂದು ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗದ ಅಧಿಕಾರಿಗೆ ಸೂಚಿಸಿದ್ದೇನೆ ಹಾಗೂ ಹೇಗೆ ಕೆಲಸ ಮುಗಿಸುತ್ತಾರೆ ಎಂಬ ಬಗ್ಗೆ ಯೋಜನಾ ವರದಿಯನ್ನು ಸಹ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮತ್ತು ಫ್ಲೈ ಓವರ್ ಕಾಮಗಾರಿ ಶೀಘ್ರ ಮುಗಿಸುವ ಕುರಿತು ಸರ್ವ ಪ್ರಯತ್ನಗಲನ್ನೂ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿಯ ಕಿಶೋರ್ ಕುಮಾರ್, ರಾಜೇಶ್ ಕಾವೇರಿ ಮತ್ತು ಶಶಿಧರ ಹೆಮ್ಮಾಡಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

14 + twelve =