ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ನೋಂದಣಿ ಆಗದ ರಿಕ್ಷಾದಲ್ಲಿ ಶ್ರೀಗಂಧದ ಕೊರಡುಗಳನ್ನು ಆಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿ ವಂಡ್ಸೆ ಗ್ರಾಮದ ಹಕ್ಲುಮನೆ ರಾಜೇಶ್ ಎಂಬುವರನ್ನು ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ.
3.8 ಕೆ.ಜಿ. ಶ್ರೀಗಂಧ, ರಿಕ್ಷಾ ಮುಟ್ಟುಗೋಲು ಹಾಕಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್, ಉಪವಲಯ ಅರಣ್ಯಾಧಿಕಾರಿ ಹೇಮಾ, ಶರತ್ ಗಾಣಿಗ, ಅರಣ್ಯ ರಕ್ಷಕ ದೇವಿಪ್ರಸಾದ್, ಉದಯ್ ವಂಡ್ಸೆ ಹಾಗೂ ಚಾಲಕ ಅಶೋಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.