ರೋಟರಿಯ ಮನುಕುಲದ ಸೇವೆ ಅನನ್ಯವಾದುದು: ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಎ. ಶೆಟ್ಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಮನುಕುಲದ ಏಳಿಗೆಗೆ ಕೊಡುಗೆ ನೀಡುತ್ತಿರುವ ರೋಟರಿಯ ಸೇವಾಕಾರ್ಯ ಅನನ್ಯವಾಗಿದೆ. ಪ್ರತಿಯೊಂದು ಯುಗದಲ್ಲಿಯೂ ಅಸಮತೋಲನ ಸೃಷ್ಠಿಯಾದಾಗ ಭಗವಂತ ಅವತರಿಸಿ ಲೋಕದಲ್ಲಿ ಶಾಂತಿ ನೆಮ್ಮದಿ ಸಮೃದ್ಧಿಯನ್ನು ನೆಲೆಗೊಳಿಸಿದ್ದಾನೆ ಅದರಂತೆ ಈ ಕಾಲ ಮಾನದಲ್ಲಿ ರೋಟರಿ ಜಗದಗಲ ಹಬ್ಬಿ ಮಾನವೀಯ ಸೇವೆಯಲ್ಲಿ ತೊಡಗಿ ಶಾಂತಿಗಾಗಿ ಶ್ರಮಿಸುತ್ತಿದೆ ಎಂದು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಎ. ಶೆಟ್ಟಿ ಹೇಳಿದರು.
ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮನುಕುಲದ ಸೇವೆಯಲ್ಲಿ ರೋಟರಿ ಕುರಿತು ಮಾತನಾಡಿದರು.

Call us

Call us

Call us

ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ವಿಪ್ಲವ್ ರಾವ್ ಅವರನ್ನು ೧೦೦ನೇ ಸದಸ್ಯರನ್ನಾಗಿ ಸೇರ್ಪಡೆಗೊಳಿಸಲಾಯಿತು. ಕಾರ್ಯದರ್ಶಿ ಸಾಲಗದ್ದೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಸದಸ್ಯರಾದ ಕೆ.ಸಿ. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಯುವಜನ ಸೇವೆ ನಿರ್ದೇಶಕ ರವಿರಾಜ್ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

3 × four =