ರೋಟರಿ ಕುಂದಾಪುರ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಠಿಣ ಪರಿಶ್ರಮ ಸಾಧಿಸಬೇಕೆಂಬ ಛಲ ನಮ್ಮಲ್ಲಿ ಆತ್ಮ ವಿಶ್ವಾಸವನ್ನು ನೆಲೆಗೊಳಿಸಿ ಉನ್ನತಿಯೆಡೆಗೆ ಕೊಂಡೊಯ್ಯುವ ಜೊತೆಗೆ ಯಶಸ್ಸನ್ನು ನೀಡುತ್ತದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೇಳಿದರು.

Call us

Call us

Call us

ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ನಡೆದ ಕುಟುಂಬ ಸಂಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ೨೦೧೬-೧೭ರ ಸಾಲಿನಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಮಾತನಾಡಿದರು.

Call us

Call us

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ರಲ್ಲಿ ೬೨೨(ಶೇ.೯೯.೫೨) ಅಂಕ ಪಡೆದು ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಂಡ್ಸೆ ಸರಕಾರಿ ಫ್ರೌಡಶಾಲೆಯ ಚಿನ್ಮಯಿ, ಬೈಂದೂರು ಸರಕಾರಿ ಫ್ರೌಡಶಾಲೆಯ ಮಂಜೇಶ್, ಉಪ್ಪುಂದ ಸರಕಾರಿ ಫ್ರೌಡಶಾಲೆಯ ರಂಜಿತಾ ಅವರನ್ನು ಸನ್ಮಾನಿಸಲಾಯಿತು. ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕುಟುಂಬದ ಸದಸ್ಯರಾದ ಮೇಘನಾ ನಾಯರ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅರ್ಹತಾ ಪರೀಕ್ಷೆಯಲ್ಲಿ ೯ನೇ ರ‍್ಯಾಂಕ್ ಪಡೆದ ಚೈತನ್ಯ ಲಕ್ಷ್ಮೀ ಅವರನ್ನು ಗೌರವಿಸಲಾಯಿತು.

ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಕಾರ್ಯದರ್ಶಿ ಮನೋಜ್ ನಾಯರ್ ಉಪಸ್ಥಿತರಿದ್ದರು. ಆವರ್ಸೆ ಮುತ್ತಯ್ಯ ಶೆಟ್ಟಿ, ರಾಘವೇಂದ್ರಚರಣ ನಾವಡ ಸನ್ಮಾನಿತರನ್ನು ಪರಿಚಯಿಸಿದರು. ಪೂರ್ವಾಧ್ಯಕ್ಷ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

two − 1 =