ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಜಿಲ್ಲಾ ಪ್ರಾಜೆಕ್ಟ್ ರೈತಬಂಧು ಕಾರ್ಯಕ್ರಮದ ಅಂಗವಾಗಿ ರೈತರಿಗೆ ರಾಸಾಯನಿಕ ಗೊಬ್ಬರ ವಿತರಣಾ ಕಾರ್ಯಕ್ರಮ ನಡೆಯಿತು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಅವರು ರೈತರಿಗೆ ಸಹಾಯಕವಾಗುವ ಉದ್ದೇಶದಿಂದ ಸ್ಥಳೀಯ ಕೃಷಿಕರಾದ ಗೋವಿಂದ ಪೂಜಾರಿ ಮತ್ತು ಶ್ರೀನಿವಾಸ ಶೇರುಗರ್ ಅವರಿಗೆ ರಾಸಾಯನಿಕ ಗೊಬ್ಬರ ವಿತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್‌ನ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಪೆರಾಜೆ, ಸದಸ್ಯರಾದ ವಿಜಯ ಪೂಜಾರಿ, ನಾರಾಯಣ ಇ.ನಾಯ್ಕ್, ವಿಷ್ಣು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.