ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರೋಟರಿ ಇಂಡಿಯಾ ಲಿಟರಸಿ ಮಿಷನ್ ಕೊಡಮಾಡುವ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

Call us

Call us

Visit Now

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಉಮೇಶ್ ಶೆಟ್ಟಿ ಕೊತ್ತಾಡಿ ವಹಿಸಿದ್ದರು.

Click here

Call us

Call us

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ, ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಸಂದೀಪ್ ಕುಮಾರ್, ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನು? ಸಿ. ಬಂಗೇರ ಅವರಿಗೆ ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡಿ ಗೌರವಿಸಲಾಯಿತು.

ಜೋನಲ್ ಲೆಫ್ಟಿನೆಂಟ್ ಪೂರ್ಣಿಮಾ ಭವಾನಿ ಶಂಕರ್ ಶುಭಾಶಂಸನೆಗೈದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷೆ ಸುಗುಣ ಆರ್. ಕೆ. ಶುಭ ಹಾರೈಸಿದರು. ಸನ್ಮಾನಿತರ ಪರವಾಗಿ ನರೇಂದ್ರ ಎಸ್. ಗಂಗೊಳ್ಳಿ ಅನಿಸಿಕೆಯನ್ನು ಹಂಚಿಕೊಂಡರು.

ಲಿಟರಸಿ ಚೇರ್ಮನ್ ದಿನಕರ್ ಶ್ಯಾನುಭಾಗ್ ಸ್ವಾಗತಿಸಿದರು. ರೋಟರಿ ಕಾರ್ಯದರ್ಶಿ ಚಂದ್ರಕಲಾ ತಾಂಡೇಲ ವಂದಿಸಿದರು. ಉಪನ್ಯಾಸಕಿ ರೇ? ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

18 − fifteen =