ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಕೂರಾಡಿಯ ಅಪ್ಪ ಅಮ್ಮ ಅನಾಥಾಲಯಕ್ಕೆ 26000 ರೂ ಮೌಲ್ಯದ ಟಿವಿ ಕೊಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಕಾರ್ಯದರ್ಶಿ ರಾಜೇಂದ್ರ, ಮಾಜಿ ಅಧ್ಯಕ್ಷ ರಾಜೀವ ಕೋಟ್ಯಾನ್, ಕೋಶಾಧಿಕಾರಿ ಕಿರಣ್ ಕುಮಾರ್, ಮಾಜಿ ಅಧ್ಯಕ್ಷ ರಮಾನಂದ ಇಂಜಿನಿಯರ್, ಸದಸ್ಯ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.