ವಂಡ್ಸೆ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಾಲೂಕಿನ ಒಂದು ಗ್ರಾಮ ಪಂಚಾಯತ್‌ಗೆ ಕೊಡಮಾಡುವ ’ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಕುಂದಾಪುರ ತಾಲೂಕು ವಂಡ್ಸೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

Click Here

Call us

Call us

Visit Now

ವಂಡ್ಸೆ ಗ್ರಾಮ ಪಂಚಾಯತ್ ಬಯಲು ಶೌಚಮುಕ್ತ ಗ್ರಾಮವಾಗಿದ್ದು ಶೇ.100ಮನೆಗಳಲ್ಲಿಯೂ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶೇ.100 ತೆರಿಗೆ ವಸೂಲಾತಿ, ಲೆಕ್ಕಪರಿಶೋಧನಾ ವರದಿಯಲ್ಲಿ ಪರಿಪೂರ್ಣತೆ, ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನ, ಪ್ರತಿಮನೆಗೂ ಉತ್ತಮ ರಸ್ತೆ ಸೌಕರ‍್ಯ, ಕಾಂಕ್ರೆಟ್ ರಸ್ತೆ ನಿರ್ಮಾಣ, ವಸತಿ ಯೋಜನೆ ಸಮರ್ಪಕ ಅನುಷ್ಠಾನ, ಸಂಜೀವಿನಿ ಯೋಜನೆಯ ಮೂಲಕ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ, ಪ್ರತಿಮನೆಗೂ ಮೀಟರ್ ಅಳವಡಿಕೆ ಮೂಲಕ ಕುಡಿಯುವ ನೀರು ಸರಬರಾಜು ಯೋಜನೆ ಚಾಲ್ತಿ, ಘನತ್ಯಾಜ್ಯ ವಿಲೇವಾರಿಗೆ ಸಿದ್ಧಪಡಿಸಲಾದ ರೂಪುರೇಷೆ , ಸಮರ್ಪಕ ಜೋಡಿ ಲೆಕ್ಕ ನಿರ್ವಹಣೆ, 14ನೇ ಹಣಕಾಸು ಹಾಗೂ ಶಾಸನಬದ್ಧ ಅನುದಾನಗಳ ವಿನಿಯೋಗ, ಪಂಚತಂತ್ರ ನಿರ್ವಹಣೆ, ಸಕಾಲ ಸೇವೆ, ಮಾಹಿತಿ ಹಕ್ಕು ಸೇವೆ, ಸಂಪನ್ಮೂಲ ಕ್ರೋಢೀಕರಣಕ್ಕೆ ಯೋಜನೆ, ಪ.ಜಾ.ಪ.ಪಂ, ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳು, ಜಮಾಬಂದಿ ನಿರ್ವಹಣೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Click here

Click Here

Call us

Call us

ಅಕ್ಟೋಬರ್ 2ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ವಂಡ್ಸೆ ಗ್ರಾಮ ಪಂಚಾಯತ್ ಸಾಕಷ್ಟು ಅಭಿವೃದ್ಧಿ ಸಾಧಿಸುತ್ತಿದ್ದು ಪ್ರಸ್ತುತ ಅಧ್ಯಕ್ಷರಾಗಿ ಉದಯಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಶಾರದಾ ರುದ್ರಯ್ಯ ಆಚಾರ್ಯ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

17 + 5 =