ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳು ಕೃಷ್ಣಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಪುಟಾಣಿ ಮಕ್ಕಳು ಮುದ್ದು ರಾಧೆ, ಮುದ್ದು ಕೃಷ್ಣನ ವೇಷ ತೊಟ್ಟು, ಮೊಸರು ಕುಡಿಕೆ, ಕೊಳಲು ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಭ್ರಮಿಸಿದರು.
ಈ ಪ್ರಯುಕ್ತವಾಗಿ ಮುದ್ಧು ರಾಧೆ ಮುದ್ಧು ಕೃಷ್ಣರಿಗೆ ಬಹುಮಾನವನ್ನು ನೀಡುವುದರ ಜೊತೆಗೆ ಸಿಹಿತಿನಿಸುಗಳನ್ನು ಹಂಚುವುದರ ಮೂಲಕ ಕೃಷ್ಣಜನ್ಮಾಷ್ಟಮಿಯ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮ ಎಸ್.ಶೆಟ್ಟಿ, ಮುಖ್ಯ ಶಿಕ್ಷಕಿ ವಿಶಾಲಾ ಶೆಟ್ಟಿ ಹಾಗೂ ಸಹ ಶಿಕ್ಷಕಿಯರು ಉಪಸ್ಥಿತರಿದ್ದರು.