ವಂಡ್ಸೆ ಮಹಿಳೆಯರ ಸ್ವಾವಲಂಬನಾ ಹೋಲಿಗೆ ಕೇಂದ್ರ ಮುಚ್ಚಿದ್ದು ಖಂಡನೀಯ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಂಡ್ಸೆಯಲ್ಲಿ ಮಹಿಳೆಯರ ಸ್ವಾವಲಂಬನಾ ಹೊಲಿಗೆ ವೃತ್ತಿ ತರಬೇತಿ ಕೇಂದ್ರ ವನ್ನು ರಾತ್ರಿ ಕಾಲದಲ್ಲಿ ಸ್ಥಳಾಂತರ ನೆಪದಲ್ಲಿ ಮುಚ್ಚಿಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

Click Here

Call us

Call us

ಇಲ್ಲಗೆ ಸಮೀಪದ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಬಳಿಯಲ್ಲಿ ತಾಲೂಕು ಪಂಚಾಯತ್ ರಾಜ್ ಒಕ್ಕೂಟ, ರಾಜ್ಯ ದಲಿತ ಸಂಘರ್ಷ ಸಮಿತಿ, ತಾಲೂಕು ಸಮಿತಿ ಕುಂದಾಪುರ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ವಂಡ್ಸೆಯ ಸ್ವಾವಲಂಬನಾ ಹೋಲಿಗೆ ತರಬೇತಿ ಕೇಂದ್ರವನ್ನು ಮುಚ್ಚಿಸಿರುದನ್ನು ಖಂಡಿಸಿ ಸರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು ಶೀರ್ಘ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳ ಸಭೆ ನೆಡೆಸಿ ಬದುಕು ಕಟ್ಟಿಕೊಂಡಿದ್ದ ಮಹಿಳೆಯರಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Click here

Click Here

Call us

Visit Now

ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಉದಯ್ ಕುಮಾರ ತಲ್ಲೂರು ಮಾತನಾಡಿ ಮಹಿಳೆಯರಿಗೆ ಹಾಗೂ ಶೋಷಿತ ಜನರಿಗೆ ಅನ್ಯಾಯವಾದರೆ ನಮ್ಮ ಸಮಿತಿಯ ಮೂಲಕ ರಾಜ್ಯಾದ್ಯಂತ ಹೋರಾಟ ಸಂಘಟಿಸುತ್ತೇವೆ ಎಂದು ಎಚ್ಚರಿಸಿದರು.

ಜಿಲ್ಲಾ ರೈತ ಸಂಘದ ಮುಖಂಡ ಕೆ. ವಿಕಾಸ ಹೆಗ್ಡೆ, ತಾಲೂಕು ಎಪಿಎಂಸಿ ಮಾಜಿ ಅಧ್ಯಕ್ಷ ಶರತ್ ಕುಮಾರ ಶೆಟ್ಟಿ, ವಡ್ಸೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಅಡ್ಕೆಕೊಡ್ಲು ಉದಯ್ ಕುಮಾರ ಮಾತನಾಡಿದರು, ಪ್ರಮುಖರಾದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶಟ್ಟಿ ಕಾನ್ಮಕ್ಕಿ, ಪಂಚಗಂಗಾ ರೈತರ ಸೇವಾ ಸಂಘದ ಅಧ್ಯಕ್ಷ ಹಕ್ಲಾಡಿ ಸಂತೋಷ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಮುಖಂಡ ಪ್ರಶಾಂತ್ ಪೂಜಾರಿ ಕರ್ಕಿ, ತಾಲೂಕು ಪಂಚಾಯಿತಿ ಸದಸ್ಯರಾದ ವಾಸುದೇವ ಪೈ, ಉದಯ ಪೂಜಾರಿ, ಪ್ರಮುಖರಾದ ನಾಗಪ್ಪ ಕೊಠಾರಿ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಮಂಜುಲ ದೇವಾಡಿಗ ಶ್ರೀನಿವಾಸ ಗಾಣಿಗ, ಚಂದ್ರ ನಾಯ್ಕ್, ಶೇಖರ್ ಬಳೆಗಾರ್, ಕೃಷ್ಣಮೂರ್ತಿ ರಾವ್, ಶರತ್ಚಂದ್ರ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *

two × 5 =