ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ಮೇಲ್ ವಾದ್ಯ ಸಿಬ್ಬಂದಿ, ಜೊಯಿಸರ ಹಿತ್ಲು ನಿವಾಸಿ ಕುಪ್ಪಯ್ಯ ದೇವಾಡಿಗ (62) ಅವರು ದೇವರ ಸೇವೆಯಲ್ಲಿಯುವಾಗಲೇ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ.
ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಹನಾಯಿ ವಾದ್ಯ ನುಡಿಸುತ್ತಿದ್ದ ಕುಪ್ಪಯ್ಯ ದೇವಾಡಿಗ ಅವರಿಗೆ ಶನಿವಾರ ಮುಂಜಾನೆ 3.30ರ ಸುಮಾರಿಗೆ ದಿಡೀರ್ ಎದೆನೋವು ಕಾಣಿಸಿಕೊಂಡ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಈರ್ವರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ.