ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣ: ಫೆ.28ರಂದು ಕೊನೆ ದಿನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸುನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.

ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸಿದ್ದು, 2020 ನೇ ಸಾಲಿನಲ್ಲಿ ವಿತರಿಸಿರುವ ಸದ್ರಿ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿಸೆಂಬರ್ 31 ಕ್ಕೆ ಮುಕ್ತಾಯಗೊಳ್ಳಲಿದ್ದು, 2021 ನೇ ಸಾಲಿಗಾಗಿ ಬಸ್ಸು ಪಾಸುಗಳನ್ನು ಜನವರಿ 15 ರಿಂದ ನವೀಕರಿಸಲು ಕ್ರಮಕೈಗೊಂಡು ಹೊಸ ಪಾಸುಗಳನ್ನು ನೀಡಲಾಗುತ್ತದೆ.

ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2020 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುವುದು.

ವಿಕಲಚೇತನರ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್https://serviceonline.gov.in/karnataka/ ನಲ್ಲಿ ಅರ್ಜಿ ಸಲ್ಲಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

15 − 4 =