ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಎಸ್. ವಿ. ಜ್ಯೂನಿಯರ್ ಕಾಲೇಜು ರಸ್ತೆಯ ಪಂಚಾಯತ್ ಹಳೆ ಕಛೇರಿ ವಠಾರದಲ್ಲಿ ಸುಮಾರು 3.30ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಕಲಚೇತನರ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ದೇವಾಡಿಗ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.