ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ: 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ರವೀಂದ್ರ ಮೊ.ನಂ: 8660523556 ಇವರನ್ನು, ನಗರದ ಡಾ.ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Call us

Call us

Call us

Leave a Reply

Your email address will not be published. Required fields are marked *

nineteen − 6 =