ವಿದ್ಯಾರ್ಥಿಗಳ ಕನಸು ನನಸಾಗಲು ಮಾರ್ಗದರ್ಶನದ ಅಗತ್ಯವಿದೆ: ಗಣೇಶ ಕಾಮತ್

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳ ನಡುವೆ ಇಂತಹ ತರಬೇತಿ ಮಾರ್ಗದರ್ಶನ ನೀಡುವುದು ಅಸಾಧ್ಯ. ವಿದ್ಯಾರ್ಥಿವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ಹೆಚ್ಚಿನ ಲಾಭ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ತರಬೇತಿ ಪಡೆದುಕೊಳ್ಳಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ ಉತ್ತಮವಾಗಲು ಸಾಧ್ಯ ಎಂದು ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಹೇಳಿದರು.

Call us

Call us

Click Here

Visit Now

ಅವರು ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಹಾಗೂ ಗಂಗಾಮೃತ ಯೋಜನೆಯ ಭಾಗವಾಗಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಜ್ಞಾನಾಮೃತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click here

Click Here

Call us

Call us

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಕೆ.ಸದಾನಂದ ವೈದ್ಯ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಸುಜಾತಾ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರಸಿದ್ಧ ಮಾನಸಿಕ ರೋಗ ತಜ್ಞ ಡಾ.ಪಿ.ವಿ.ಭಂಡಾರಿ ಅವರು ಹದಿಹರೆಯದ ಸಮಸ್ಯೆಗಳು, ಕಾರಣ ಮತ್ತು ಪರಿಹಾರದ ಬಗೆಗ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕ ಡಾ.ಗಣೇಶ ಭಟ್ ಎಸ್. ಅವರು ನಿಮ್ಮ ವ್ಯಕ್ತಿತ್ವವನ್ನು ಗುರುತಿಸಿ ವಿಚಾರದ ಮಾಹಿತಿ ಮಾರ್ಗದರ್ಶನ ನೀಡಿದರು. ಜ್ಞಾನಗಂಗಾ ಕಾರ್ಯಕ್ರಮದ ಅಧ್ಯಕ್ಷ ಕೆ.ಕೃಷ್ಣ ಭಟ್ ಉಪಸ್ಥಿತರಿದ್ದರು.

ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ ಕಾಮತ್ ಗುಜ್ಜಾಡಿ ಕಾರ್ಯಕ್ರಮ ನಿರೂಪಿಸಿದರು. ಜ್ಞಾನಾಮೃತ ಕಾರ್ಯಕ್ರಮದ ಉಸ್ತುವಾರಿ ಜಿ.ವೆಂಕಟೇಶ ನಾಯಕ್ ವಂದಿಸಿದರು.

 

Leave a Reply

Your email address will not be published. Required fields are marked *

6 − 5 =