ವಿಶೇಷ ಚೇತನರ ವಿಶೇಷ ಗ್ರಾಮಸಭೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮಸಭೆ, ಯುಡಿಐಡಿ ಕಾರ್ಡ್ ವಿತರಣೆ ಹಾಗೂ 2016ರ ಕಾಯ್ದೆ ಕುರಿತ ಕಾರ್ಯಾಗಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಮಂಗಳವಾರ ಜರಗಿತು.

Call us

Call us

Click Here

Visit Now

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಡಿಎನ್‌ಎ ರೂಪಲಕ್ಷ್ಮೀ ಅವರು 2016ರ ಕಾಯ್ದೆ ಕುರಿತು ಹಾಗೂ ಸರಕಾರದಿಂದ ವಿಕಲಚೇತನರಿಗೆ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಾಲೂಕು ಸಂಯೋಜಕ ಮಂಜುನಾಥ ಹೆಬ್ಬಾರ್ ಮಾಹಿತಿ ನೀಡಿದರು. ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಯಿತು.

Click here

Click Here

Call us

Call us

ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ಬಿ.ಗಣೇಶ ಶೆಣೈ, ದೇವು ಸಿಪಾಯಿ, ಶಾಂತಿ ಖಾರ್ವಿ, ಬಿ.ಲಕ್ಷ್ಮೀಕಾಂತ ಮಡಿವಾಳ, ನಾಗರಾಜ ಖಾರ್ವಿ, ಮಹಮ್ಮದ್ ತಬ್ರೇಜ್, ಶೇಕ್ ಫರ್ವಿನ್, ಖಲೀಲ್, ಅಮ್ಮು ಮೊಗೇರ‍್ತಿ, ಗ್ರಾಪಂ ಕಾರ್ಯದರ್ಶಿ ದಿನೇಶ ಶೇರುಗಾರ್, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸರದಾರ್ ನಫೀಜ್ ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ವಿಕಲಚೇತನರು, ಪೋಷಕರು, ಗ್ರಾಮಸ್ಥರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಗ್ರಾ.ಪಂ. ಕರ ಸಂಗ್ರಹಕಾರ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ವಂದಿಸಿದರು.

Leave a Reply

Your email address will not be published. Required fields are marked *

10 + nineteen =